Publish Date: Thu, 11 Jun 2026 (19:22 IST)
Updated Date: Thu, 11 Jun 2026 (19:25 IST)
ದಾವಣಗೆರೆ: ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಪದಚ್ಯುತ ಪೀಠಾಧ್ಯಕ್ಷ ವಚನಾನಂದ ಸ್ವಾಮೀಜಿ ವಿರುದ್ಧ ದಾಖಲಾದ ಕೇಸ್ ಸಂಬಂಧ ನ್ಯಾಯಾಲಯಕ್ಕೆ ಇಂದು ಪೊಲೀಸರು ದೋಷಾರೋಪಟ್ಟಿಯನ್ನು ಸಲ್ಲಿಕೆ ಮಾಡಿದ್ದಾರೆ.
ಪ್ರಕರಣ ದಾಖಲಾದ ತಿಂಗಳಲ್ಲೇ ತನಿಖೆ ಪೂರ್ಣಗೊಂಡಿದ್ದು 100ಕ್ಕೂ ಹೆಚ್ಚು ಪುಟಗಳ ದೋಷಾರೋಪಪಟ್ಟಿ ಜಿಲ್ಲಾ ವಿಶೇಷ ಪೋಕ್ಸೊ ನ್ಯಾಯಾಲಯಕ್ಕೆ ಜೂನ್ 6ರಂದು ಸಲ್ಲಿಕೆಯಾಗಿದೆ.
ಸಾಕ್ಷ್ಯಗಳು, ಸಂತ್ರಸ್ತ ಬಾಲಕ, ಆತನ ಸಹಪಾಠಿಗಳು ಸೇರಿದಂತೆ ಹಲವರ ಹೇಳಿಕೆಯನ್ನು ದೋಷಾರೋಪಟ್ಟಿಯಲ್ಲಿ ಉಲ್ಲೇಖ ಮಾಡಲಾಗಿದೆ.
ವಸತಿನಿಲಯದ ಬಾಲಕರನ್ನು ದುರ್ಬಳಕೆ ಮಾಡಿಕೊಂಡು ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲೂಸಿ) ಸಿದ್ಧಪಡಿಸಿದ ವರದಿ ದೋಷಾರೋಪಪಟ್ಟಿಯಲ್ಲಿದೆ. ಕೆಲ ವೈದ್ಯಕೀಯ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ವರದಿಗಳು ಮಾತ್ರ ಬಾಕಿ ಇವೆ ಎಂದು ಮೂಲಗಳು ಮಾಹಿತಿ ನೀಡಿವೆ.
16 ವರ್ಷದ ಸಂತ್ರಸ್ತ ಬಾಲಕನ ತಾಯಿಯೊಬ್ಬರು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಠಾಣೆಯಲ್ಲಿ ಮೇ 5ರಂದು ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೊ ಪ್ರಕರಣ ನೀಡಿದ್ದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ