Daily Horoscope
✕

ವಚನಾನಂದ ಸ್ವಾಮೀಜಿ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಸಂಪ್ರಿಯ
ಗುರುವಾರ, 11 ಜೂನ್ 2026 (19:22 IST)
ದಾವಣಗೆರೆ: ಬಾಲಕನ ಮೇಲೆ‌ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಪದಚ್ಯುತ ಪೀಠಾಧ್ಯಕ್ಷ ವಚನಾನಂದ ಸ್ವಾಮೀಜಿ ವಿರುದ್ಧ ದಾಖಲಾದ ಕೇಸ್ ಸಂಬಂಧ ನ್ಯಾಯಾಲಯಕ್ಕೆ ಇಂದು ಪೊಲೀಸರು ದೋಷಾರೋಪಟ್ಟಿಯನ್ನು ಸಲ್ಲಿಕೆ ಮಾಡಿದ್ದಾರೆ. 

ಪ್ರಕರಣ ದಾಖಲಾದ ತಿಂಗಳಲ್ಲೇ ತನಿಖೆ ಪೂರ್ಣಗೊಂಡಿದ್ದು 100ಕ್ಕೂ ಹೆಚ್ಚು ಪುಟಗಳ ದೋಷಾರೋಪಪಟ್ಟಿ ಜಿಲ್ಲಾ ವಿಶೇಷ ಪೋಕ್ಸೊ ನ್ಯಾಯಾಲಯಕ್ಕೆ ಜೂನ್‌ 6ರಂದು ಸಲ್ಲಿಕೆಯಾಗಿದೆ. 

ಸಾಕ್ಷ್ಯಗಳು, ಸಂತ್ರಸ್ತ ಬಾಲಕ, ಆತನ ಸಹಪಾಠಿಗಳು ಸೇರಿದಂತೆ ಹಲವರ ಹೇಳಿಕೆಯನ್ನು ದೋಷಾರೋಪಟ್ಟಿಯಲ್ಲಿ ಉಲ್ಲೇಖ ಮಾಡಲಾಗಿದೆ. 

ವಸತಿನಿಲಯದ ಬಾಲಕರನ್ನು ದುರ್ಬಳಕೆ ಮಾಡಿಕೊಂಡು ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲೂಸಿ) ಸಿದ್ಧಪಡಿಸಿದ ವರದಿ ದೋಷಾರೋಪಪಟ್ಟಿಯಲ್ಲಿದೆ. ಕೆಲ ವೈದ್ಯಕೀಯ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ವರದಿಗಳು ಮಾತ್ರ ಬಾಕಿ ಇವೆ ಎಂದು ಮೂಲಗಳು ಮಾಹಿತಿ ನೀಡಿವೆ.

16 ವರ್ಷದ ಸಂತ್ರಸ್ತ ಬಾಲಕನ ತಾಯಿಯೊಬ್ಬರು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಠಾಣೆಯಲ್ಲಿ ಮೇ 5ರಂದು ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೊ ಪ್ರಕರಣ ನೀಡಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರಾಂತ್ಯದಲ್ಲಿ ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಗ್ರೇ ಡಿವೋರ್ಸ್ ಎಂದರೇನು, ಭಾರತೀಯ ದಂಪತಿಗಳಲ್ಲಿ ಈ ಟ್ರೆಂಡ್ ಹೆಚ್ಚುತ್ತಿರುವುದು ಯಾಕೆ

ಮದುವೆ ಸೀಸನ್ ಆರಂಭ: ಚಿನ್ನದ ಬೆಲೆ ಮತ್ತೆ ಗಗನಕ್ಕೇರಲಿದೆಯೇ, ಮಾರುಕಟ್ಟೆ ತಜ್ಞರ ಲೆಕ್ಕಾಚಾರ ಏನು

ಕರ್ನಾಟಕ ರಾಜ್ಯ ಬೊಕ್ಕಸಕ್ಕೆ ಅತೀ ಹೆಚ್ಚು ಆದಾಯ ತಂದುಕೊಡುವ ಕ್ಷೇತ್ರ ಯಾವುದು

ಮಹಿಳೆಯರ ಹೆಸರಲ್ಲಿ ಸೈಟ್ ಖರೀದಿ: ಯಾವ ಲಾಭಗಳು ಸಿಗುತ್ತವೆ, ಖರೀದಿಗೂ ಮುನ್ನ ಗಮನಿಸಬೇಕಾದ ಅಂಶಗಳೇನು

ಮುಂದಿನ ಸುದ್ದಿ