Publish Date: Mon, 13 Jul 2026 (16:00 IST)
Updated Date: Mon, 13 Jul 2026 (16:04 IST)
ದಾವಣಗೆರೆ: ಫೋಕ್ಸೋ ಪ್ರಕರಣದಲ್ಲಿ ಹರಿಹರ ಪೀಠದ ವಚನಾನಂದ ಸ್ವಾಮೀಜಿಗೆ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಸಿಕ್ಕಿದೆ.
ಮಠದಲ್ಲಿದ್ದ ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಆರಂಭದಲ್ಲಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಝೀರೋ ಎಫ್‌ಐಆರ್ ದಾಖಲಾಗಿದ್ದು, ಬಳಿಕ ತನಿಖೆಗಾಗಿ ಪ್ರಕರಣವನ್ನು ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು.
ಇನ್ನೂ ಪ್ರಕರಣ ದಾಖಲಾಗುವ ಮುನ್ನವೇ ವಚನಾನಂದ ಸ್ವಾಮೀಜಿ ನಿರೀಕ್ಷಣಾ ಜಾಮೀನು ಪಡೆದಿದ್ದರು. ಆದರೆ, ಆ ಜಾಮೀನನ್ನು ರದ್ದುಪಡಿಸುವಂತೆ ಸಂತ್ರಸ್ತ ಬಾಲಕನ ತಾಯಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಜೂ.25 ರಂದು ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ವಚನಾನಂದ ಸ್ವಾಮೀಜಿಯ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸಿತ್ತು. ಅಲ್ಲದೇ ರೆಗ್ಯುಲರ್ ಜಾಮೀನು ಪಡೆಯಲು ಮೂರು ವಾರಗಳ ಕಾಲಾವಕಾಶ ನೀಡಿತ್ತು. ಅದರಂತೆ ವಚನಾನಂದ ಸ್ವಾಮೀಜಿ ಅವರು ದಾವಣಗೆರೆ ಜಿಲ್ಲಾ ಫೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಜೂ.27 ರಂದು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಇನ್ನೂ ಸ್ವಾಮೀಜಿಗೆ ಜಾಮೀನು ಮಂಜೂರು ಆಗುತ್ತಿದ್ದ ಹಾಗೇ ಬೆಂಬಲಿಗರು ಸಿಹಿ ಹಂಚಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ