Select Your Language

Notifications

webdunia
webdunia
webdunia
webdunia

ಗಾಳಿ ಸಹಿತ ಮಳೆಗೆ ಸಿಲಿಕಾನ್ ಸಿಟಿ ಬೆಚ್ಚುಬಿದ್ದಿದೆ ,,!

Silicon City is shaken by rain with wind
bangalore , ಸೋಮವಾರ, 22 ಮೇ 2023 (21:18 IST)
ಭಾರಿ ಮಳೆ ಸುರಿದ ಹಿನ್ನೆಲೆಯಲ್ಲಿ ಭಾನುವಾರ ಬಿಬಿಎಂಪಿ ಮುಖ್ಯ ಆಯುಕ್ತ ಹಾಗೂ ನಗರ ಪೊಲೀಸ್ ಆಯುಕ್ತರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯತುರ್ತು ಸಭೆ ನಡೆಸಿದ ಅವರು, ನಗರದಲ್ಲಿರುವ ಎಲ್ಲಾ ಅಂಡರ್ ಪಾಸ್‌ಗಳಲ್ಲಿ ಸುರಕ್ಷತೆಯನ್ನು ಪರಿಶೀಲನೆ ಮಾಡಬೇಕು. ಮಳೆ ನೀರು ತುಂಬಿಕೊಳ್ಳುವ ಸಾಧ್ಯತೆ ಇರುವ ಅಂಡರ್ ಪಾಸ್‌ಗಳಲ್ಲಿ ನೀರು ನಿಲ್ಲದಂತೆ ವ್ಯವಸ್ಥೆ ಮಾಡುವವರೆಗೆ ಬಂದ್ ಮಾಡುವಂತೆ ನಿರ್ದೇಶಿಸಿದ್ದಾರೆ. ಅಲ್ಲದೇ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ. ಮಳೆಯಿಂದ ಉರುಳಿ ಬಿದ್ದಿರುವ ಮರಗಳನ್ನು ತಕ್ಷಣ ತೆರವುಗೊಳಿಸಬೇಕು. ಮಳೆ ಅನಾಹುತದಿಂದ ಹಾನಿಗೊಳಗಾಗಿರುವ ಪ್ರದೇಶಗಳಲ್ಲಿ ಕೂಡಲೇ ಪರಿಹಾರ ಕ್ರಮ ಕೈಗೊಳ್ಳಬೇಕು.  ನಿರ್ಲಕ್ಷ್ಯ ತೋರಿ ಸಾರ್ವಜನಿಕರಿಗೆ ತೊಂದರೆ ಉಂಟಾದರೆ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಿ ಎಂದು ಎಚ್ಚರಿಕೆ ನೀಡಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ರಸ್ತೆಗಳೆಲ್ಲಾ ಕೆರೆಗಳಂತಾಗಿ, ವಾಹನ ಸವಾರರು ಪರದಾಡುವಂತಾಗಿತ್ತು.!