Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಸಿಲಿಕಾನ್ ಸಿಟಿಯಲ್ಲಿ ಕೋವಿಡ್ ಸ್ಪೋಟ ಕಾಲೇಜಿಗೆ 5 ದಿನ ರಜೆ ಘೋಷಣೆ

webdunia
ಶುಕ್ರವಾರ, 1 ಜುಲೈ 2022 (15:51 IST)
ಸಿಲಿಕಾನ್ ಸಿಟಿ ಬೆಂಗಳೂರು ನಗರದಲ್ಲಿ ಮತ್ತೊಂದು ಕೋವಿಡ್ ಕ್ಲಸ್ಟರ್ ಪತ್ತೆಯಾಗಿದ್ದು, ರಾಜರಾಜೇಶ್ವರಿನಗರದ ಕಾಲೇಜಿನಲ್ಲಿ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ 5 ದಿನ ರಜೆ ಘೋಷಣೆ ಮಾಡಲಾಗಿದೆ.
ರಾಜರಾಜೇಶ್ವರಿನಗರದ ದೊಡ್ಡಬಿದರಕಲ್ಲು (ವಾರ್ಡ್ ನಂ.40) ನಲ್ಲಿರುವ ಅನುಪಮಾ ಕಾಲೇಜಿನಲ್ಲಿ ದ್ವಿತೀಯ ಪಿಯು ವಾಣಿಜ್ಯ ವ್ಯಾಸಂಗ ಮಾಡುತ್ತಿರುವ ಎಂಟು ವಿದ್ಯಾರ್ಥಿಗಳು ಕಾಲೇಜಿನಲ್ಲಿ ಆರೋಗ್ಯಾಧಿಕಾರಿಗಳು ನಡೆಸಿದ ಆರ್‌ಟಿಪಿಸಿಆರ್ ಪರೀಕ್ಷೆಯಲ್ಲಿ ಪಾಸಿಟಿವ್ ದೃಢಪಟ್ಟಿದೆ. ಆ ವರ್ಗದ ವಿದ್ಯಾರ್ಥಿಗಳಿಗೆ ಸಂಸ್ಥೆಯು ಐದು ದಿನಗಳ ರಜೆಯನ್ನು ಘೋಷಿಸಿದೆ. ಎಲ್ಲಾ ವಿದ್ಯಾರ್ಥಿಗಳು ಲಕ್ಷಣರಹಿತರಾಗಿದ್ದು, ಎಲ್ಲರೂ ಮನೆಯಲ್ಲಿ ಪ್ರತ್ಯೇಕವಾಗಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
 
ಆರೋಗ್ಯ ಇಲಾಖೆ ಸಿಬ್ಬಂದಿ ಶಾಲೆಗಳು, ಕಾಲೇಜುಗಳು, ಕಾರ್ಖಾನೆಗಳು ಮತ್ತು ಇತರ ಜನನಿಬಿಡ ಸ್ಥಳಗಳಲ್ಲಿ ಕೋವಿಡ್ ಪರೀಕ್ಷೆಗಳನ್ನು ನಡೆಸುತ್ತಿದ್ದು, ಜೂನ್ 26 ರಂದು ಪರೀಕ್ಷೆಗೊಳಪಡಿಸಿದ 112 ವಿದ್ಯಾರ್ಥಿಗಳ ಪೈಕಿ ಎಂಟು ಮಂದಿಗೆ ಪಾಸಿಟಿವ್ ಬಂದಿದೆ. ಸೋಂಕಿತರು ಅಂತರರಾಜ್ಯ ಪ್ರಯಾಣದ ಇತಿಹಾಸವನ್ನು ಹೊಂದಿದ್ದು, ಇತರ 50 ವಿದ್ಯಾರ್ಥಿಗಳ RTPCR ಫಲಿತಾಂಶಗಳು ನೆಗೆಟಿವ್ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿ ಚುನಾವಣೆ ಸಿಸಿಬಿಯಿಂದ ಬೆಂಗಳೂರು ರೌಡಿಗಳಿಗೆ ವಾರ್ನಿಂಗ್