Select Your Language

Notifications

webdunia
webdunia
webdunia
webdunia

ದಾಖಲೆ ಬೆಲೆ ಕಂಡ ರೇಷ್ಮೆ ಬೆಳೆ

ದಾಖಲೆ ಬೆಲೆ ಕಂಡ ರೇಷ್ಮೆ ಬೆಳೆ
ಬೆಂಗಳೂರು , ಬುಧವಾರ, 2 ಫೆಬ್ರವರಿ 2022 (19:34 IST)
ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ಬುಧವಾರ ದಾಖಲೆ ಮಟ್ಟದಲ್ಲಿ ರೇಷ್ಮೆಗೂಡು ಹರಾಜಾಗಿದ್ದು, ಒಂದು ಕೆಜಿ ರೇಷ್ಮೆಗೂಡು ಬರೋಬ್ಬರಿ‌ 1043 ರೂಪಾಯಿಗೆ ಮಾರಾಟವಾಗಿದೆ.
 
ಈ ಕುರಿತು ಸಂತಸ ವ್ಯಕ್ತಪಡಿಸಿರುವ ಸಚಿವ ಡಾ.ನಾರಾಯಣಗೌಡ, ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ರೇಷ್ಮೆಗೂಡಿನ ದರ ನಾಲ್ಕು ಡಿಜಿಟ್‌ಗೆ ತಲುಪಿರುವುದು ಉತ್ತಮ ಬೆಳವಣಿಗೆ.
ದಿನದಿಂದ ದಿನಕ್ಕೆ ರೇಷ್ಮೆಗೂಡಿನ ದರ ಏರಿಕೆಯಾಗುತ್ತಿದೆ ಎಂದಿದ್ದಾರೆ.
 
ರೇಷ್ಮೆಗೂಡಿನ ದರ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ರೇಷ್ಮೆ ಬೆಳೆಗಾರರ ಜತೆ ನಮ್ಮ ಸರ್ಕಾರ ಇದೆ. ರೇಷ್ಮೆ ಬೆಳೆಗಾರರಿಗೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ಹಾಗೂ ಗುಣಮಟಕ್ಕೆ ತಕ್ಕಂತೆ ಉತ್ತಮ ಬೆಲೆ ಸಿಗುವಂತೆ ನೋಡಿಕೊಳ್ಳುತ್ತೇನೆ. ರೇಷ್ಮೆಗೂಡು ದರ ನಾಲ್ಕು ಡಿಜಿಟ್‌ಗೆ ತಲುಪಿರುವುದು ಮತ್ತಷ್ಟು ರೈತರು ರೇಷ್ಮೆ ಬೆಳೆಯುವುದಕ್ಕೆ ಪ್ರೇರಣೆಯಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
 
ರೇಷ್ಮೆ ಮಾರುಕಟ್ಟೆಗಳಲ್ಲಿ ಆಗುತ್ತಿದ್ದ ಭ್ರಷ್ಟಾಚಾರ, ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಿರುವ ಪರಿಣಾಮದಿಂದ ರೇಷ್ಮೆ ಗೂಡಿನ ಗುಣಮಟ್ಟಕ್ಕೆ ತಕ್ಕಂತೆ ನೈಜ ಬೆಲೆ ಸಿಗುತ್ತಿದೆ. ರೇಷ್ಮೆ ಇಲಾಖೆಯಲ್ಲಿ ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಂಡ ಪರಿಣಾಮ ದಾಖಲೆ ದರಕ್ಕೆ ರೇಷ್ಮೆಗೂಡು ಮಾರಾಟ ಆಗುತ್ತಿದೆ ಎಂದಿದ್ದಾರೆ.
 
ರೇಷ್ಮೆ ದರ ಸರಾಸರಿ ಕಳೆದ ವರ್ಷಕ್ಕಿಂತ ಮೂರು ಪಟ್ಟು ಹೆಚ್ಚಾಗಿದೆ. 2020-21ನೇ ಸಾಲಿನಲ್ಲಿ ಪ್ರತಿ ಕೆಜಿ ರೇಷ್ಮೆಗೂಡಿಗೆ ಸರಾಸರಿ 300 ರೂಪಾಯಿ ಇತ್ತು. 2021ರ ನವೆಂಬರ್- ಡಿಸೆಂಬರ್​ನಲ್ಲಿ 700-800 ರೂಪಾಯಿ ಇತ್ತು. ಈಗ ಒಂದು ಕೆಜಿ ರೇಷ್ಮೆಗೂಡು 1043 ರೂಪಾಯಿಗೆ ಮಾರಾಟವಾಗುವ ಮೂಲಕ ದಾಖಲೆ ಸೃಷ್ಟಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಳ್ಳತನಕ್ಕೆ ಟ್ರೈನಿಂಗ್ ನೀಡುತ್ತಿದ್ದ ಖತರ್ನಾಕ್ ಬಂಧನ