ಸುಖಾ ಸುಮ್ಮನೇ ಓಡಾಡಿದ್ರೆ ನಿಮ್ಮ ಕೈಗೂ ಬೀಳುತ್ತೆ ಮುದ್ರೆ

Webdunia
ಗುರುವಾರ, 26 ಮಾರ್ಚ್ 2020 (17:35 IST)
ಕೋವಿಡ್ 19 ವೈರಸ್ ಮುನ್ನೆಚ್ಚರಿಕೆಯ ಕ್ರಮವಾಗಿ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದೆ.

ಉತ್ತರಕನ್ನಡ ಜಿಲ್ಲಾಡಳಿತವು ಇನ್ನಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಅನಾವಶ್ಯಕವಾಗಿ ಯಾವುದೇ ಕಾರಣಗಳಿಲ್ಲದೇ ಓಡಾಡುವವರ ಡ್ರೈವಿಂಗ್ ಲೈಸೆನ್ಸ್ ಹಾಗೂ ವಾಹನದ ನೊಂದಣಿಯನ್ನು ರದ್ದು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಹರೀಶಕುಮಾರ್ ಕೆ. ಎಚ್ಚರಿಕೆ ನೀಡಿದ್ದರು. ಆದರೆ ಕೆಲವು ಸಾರ್ವಜನಿಕರು ಇದಕ್ಕೂ ಬಗ್ಗದ ಹಿನ್ನೆಲೆಯಲ್ಲಿ ಇನ್ನಷ್ಟು ಬಿಗಿ ಕ್ರಮಕ್ಕೆ ಅವರು ಮುಂದಾಗಿದ್ದಾರೆ.

ಯಾವುದೇ ಕಾರಣಗಳಿಲ್ಲದೇ ಅನಗತ್ಯವಾಗಿ ರಸ್ತೆಯಲ್ಲಿ ಓಡಾಡಿ ಕಾಯ್ದೆ ಉಲ್ಲಂಘಿಸುವ ವ್ಯಕ್ತಿ ಕೈಗೆ ಮುದ್ರೆ ಹಾಕಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದ್ದಾರೆ.  ಮುದ್ರೆ ಹಾಕಿಸಿಕೊಂಡ ವ್ಯಕ್ತಿ ಎರಡನೇ ಬಾರಿ ಮತ್ತೆ ಆದೇಶ ಉಲ್ಲಂಘಿಸಿದರೆ ಆತ ವಾಸಿಸುವ ವಸತಿ ಪ್ರದೇಶದಲ್ಲಿ ಆತನ ಹೆಸರನ್ನು ಸಾರ್ವಜನಿಕ ಪ್ರಕಟಣೆಯ ಮೂಲಕ ಘೋಷಿಸಲಾಗುತ್ತದೆ.

ಮೂರನೇ ಬಾರಿಯೂ ಆದೇಶ ಉಲ್ಲಂಘಿಸಿದರೆ ಜಿಲ್ಲಾಡಳಿತದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕಾನೂನು ಉಲ್ಲಂಘನೆ ಮಾಡಿದವರು ಎಂದು ಆತನ ಫೋಟೊ ಹಾಕಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರ್ಖಾ ಧರಿಸಿ ಹೋಳಿ ಆಟವಾಡಲು ಹೋಗಿ ಕೇಸ್ ಹಾಕಿಸಿಕೊಂಡ ಐವರು

ಖಮೇನಿ ಸಾವಿನ ಬಗ್ಗೆ ಪ್ರತಿಕ್ರಿಯೆ ಕೊಟ್ಟ ಭಾರತ, ಹೇಳಿದ್ದೇನು

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ಯುದ್ಧವು ಸಮಸ್ಯೆಗಳಿಗೆ ಪರಿಹಾರವಲ್ಲ: ಪ್ರಧಾನಿ ನರೇಂದ್ರ ಮೋದಿ

ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾಗೆ 14 ದಿನ ನ್ಯಾಯಾಂಗ ಬಂಧನ

ಮುಂದಿನ ಸುದ್ದಿ
Show comments