Select Your Language

Notifications

webdunia
webdunia
webdunia
webdunia

ಉಪಚುನಾವಣೆಯಲ್ಲಿ ಮುಸ್ಲಿಂ ಅಭ್ಯರ್ಥಿಗಳನ್ನು ಸೋಲಿಸಲು ಕುತಂತ್ರ

Sindagi and Hanagal cunning
bangalore , ಬುಧವಾರ, 3 ನವೆಂಬರ್ 2021 (22:09 IST)
ಸಿಂದಗಿ ಮತ್ತು ಹಾನಗಲ್ ಉಪಚುನಾವಣೆಯಲ್ಲಿ ಮುಸ್ಲಿಂ ಅಭ್ಯರ್ಥಿಗಳನ್ನು ಸೋಲಿಸಲು ಕುತಂತ್ರ ಮಾಡುವ ಮೂಲಕ ಕಾಂಗ್ರೆಸ್ ಪಕ್ಷವು ತನ್ನ ನಿಜ ಸ್ವರೂಪವನ್ನು ಬಯಲು ಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯ ಫಾರೂಕ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಮುಸ್ಲಿಂ ನಾಯಕರು ವಕ್ಫ್ ಆಸ್ತಿ ಕಬಳಿಸುವುದು, ಐಎಂಎ ಹಗರಣ, ಅಮಾನತ್ ಬ್ಯಾಂಕ್ ದಿವಾಳಿ ಮುಂತಾದ ಪ್ರಕರಣಗಳಿಂದ ಮುಸ್ಲಿಮರ ಮಧ್ಯೆ ಕುಖ್ಯಾತಿ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಮುಸ್ಲಿಮರ ಹೊಸ ಪೀಳಿಗೆಯ ಪ್ರಾಮಾಣಿಕ  ನಾಯಕರನ್ನು ಬೆಳೆಸಲು ಯತ್ನಿಸಿದೆ. ಹಾಗೆಂದೇ ಸಿಂದಗಿ ಮತ್ತು ಹಾನಗಲ್ ನಲ್ಲಿ ಹೊಸ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿತ್ತು. ಆದರೆ ಜಮೀರ್ ಖಾನ್ , ಸಿದ್ದರಾಮಯ್ಯ ಮುಂತಾದವರಿಗೆ ಇದನ್ನು ಸಹಿಸಲು ಸಾಧ್ಯವಾಗಿಲ್ಲ. ಬಿಜೆಪಿ ಜೊತೆಗೆ ರಹಸ್ಯ ಒಪ್ಪಂದ ಮಾಡಿಕೊಂಡು ಅವರು ಮುಸ್ಲಿಂ ಅಭ್ಯರ್ಥಿಗಳನ್ನು ಸೋಲಿಸಿದ್ದಾರೆ ಎಂದರು.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಮತ್ತು ಎಚ್.ಡಿ.ಕುಮಾರಸ್ವಾಮಿ ಪಕ್ಷದ ನೀತಿಯಂತೆ ಮುಂದಿನ ಚುನಾವಣೆಗಳಲ್ಲೂ ಹೊಸ ಮುಸ್ಲಿಂ ಯುವ ನಾಯಕತ್ವ ಬೆಳೆಸಲು ನಿರ್ಧರಿಸಿದ್ದಾರೆ. ಸೋಲು- ಗೆಲುವು ಚುನಾವಣೆಯಲ್ಲಿ ಸಹಜ. ಸಿಂದಗಿಯಲ್ಲಿ ಜೆಡಿಎಸ್ ಪಕ್ಷದ ನಾಯಕರನ್ನು ಪಕ್ಷಾಂತರ ಮಾಡಿಸಿ ತಮ್ಮ ಅಭ್ಯರ್ಥಿಯನ್ನಾಗಿ ಮಾಡಿದ ಕಾಂಗ್ರೆಸ್ ನಾಯಕರಿಗೆ ಅಲ್ಲಿನ ಮತದಾರರು ತಕ್ಕ ಉತ್ತರ ನೀಡಿದ್ದಾರೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಪ್ತ ಯು.ಬಿ. ಶೆಟ್ಟಿ ಮನೆ ಮೇಲೆ ಐಟಿ ದಾಳಿ