ಬೆಂಗಳೂರು: ಹಿಂದೂಗಳು ಒಗ್ಗಟ್ಟಾಗಿದ್ದರೆ ರಾಜಕಾರಣಿಗಳು ಹೇಗೆ ಬದಲಾಗುತ್ತಾರೆ ಎಂಬುದಕ್ಕೆ ಸಿಎಂ ಸಿಂಧೂರವೇ ಸಾಕ್ಷಿ ಎಂದು ಸಿದ್ದರಾಮಯ್ಯ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಟೀಕೆ ಮಾಡಿದ್ದಾರೆ.
ಸಿದ್ದರಾಮಯ್ಯ ಮೊದಲು ಯುದ್ಧ ಬೇಡ ಎಂದು ಪಾಕಿಸ್ತಾನಿಗಳಿಗೆ ಹೀರೋ ಆಗಿದ್ದರು. ಜನ ಥೂ ಛೀ ಅಂತಾ ಉಗಿದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆಯನ್ನು ಬದಲು ಮಾಡಿದ್ದಾರೆ. ಇವತ್ತು ಕಾಂಗ್ರೆಸ್ ಶಾಂತಿಯ ಮಂತ್ರದ ಟ್ವೀಟ್ ಮಾಡಿತ್ತು. ಜನ ತಿರುಗಿ ಬಿದ್ದ ಮೇಲೆ ಟ್ವೀಟ್ ಡಿಲೀಟ್ ಮಾಡಿದ್ದಾರೆ. ಜನಕ್ಕೆ ಹೆದರಿ ಸಿದ್ದರಾಮಯ್ಯ ಇಂದು ಹಣೆಗೆ ಸಿಂಧೂರ ಇಟ್ಟುಕೊಂಡಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
ಜಮ್ಮು ಮತ್ತು ಕಾಶ್ಮೀರ ಭಾರತ ಮಾತೆಯ ಸಿಂಧೂರ ಎಂಬ ಜೈಕಾರ ಹಾಕಿಕೊಂಡು ಎಲ್ಲಾ ಬಿಜೆಪಿ ಕಾರ್ಯಕರ್ತರು ಬೆಳೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಬಾಯಿ ಮಾತಿಗೆ ಈ ಜಯ ಘೋಷ ಹಾಕಲಿಲ್ಲ. ಇವತ್ತು ಆಪರೇಷನ್ ಸಿಂಧೂರ ಮಾಡಿ ಅದನ್ನು ನಿಜ ಮಾಡಿದ್ದಾರೆ. ನ್ಯೂಕ್ಲಿಯರ್ ಟೆಸ್ಟ್ ಮಾಡಿದ ವಾಜಪೇಯಿ ನಮ್ಮ ಹೆಮ್ಮೆ. ಈಗ ಮೋದಿ ಅವರು ಕೂಡ ಹೆಮ್ಮೆ ಎಂದು ಬಣ್ಣಿಸಿದ್ದಾರೆ.