ಮಕ್ಕಳ ಕತ್ತು ಸೀಳಿ ಕೊಲೆಗೈದ ಪಾಪಿ ತಂದೆ!

Webdunia
ಶುಕ್ರವಾರ, 23 ಜೂನ್ 2023 (11:53 IST)
ಮಂಡ್ಯ : ಕೌಟುಂಬಿಕ ಕಲಹ ಹಿನ್ನೆಲೆ ಪಾಪಿ ತಂದೆ ಇಬ್ಬರು ಪುಟ್ಟ ಮಕ್ಕಳ ಕುತ್ತಿಗೆ ಸೀಳಿ ಕೊಲೆ ಮಾಡಿದ್ದು, ತನ್ನ ಮಡದಿಗೂ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದಲ್ಲಿ ಜರುಗಿದೆ.

 
ಆದರ್ಶ (4) ಹಾಗೂ ಅಮೂಲ್ಯ (2) ತಂದೆಯಿಂದ ಕೊಲೆಯಾದ ದುರ್ದೈವಿ ಮಕ್ಕಳು. ಶ್ರೀಕಾಂತ್ ತನ್ನ ಇಬ್ಬರು ಮಕ್ಕಳನ್ನು ಕೊಂದು ತನ್ನ ಪತ್ನಿ ಲಕ್ಷ್ಮಿಗೆ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಶ್ರೀಕಾಂತ್ ಗುಲ್ಬರ್ಗ ಜಿಲ್ಲೆಯ ಗಾಣಗಪುರ ಗ್ರಾಮದವನಾಗಿದ್ದು, ಲಕ್ಷ್ಮಿಯನ್ನು ವರಿಸಿ 6 ವರ್ಷಗಳಾಗಿತ್ತು. ಮದುವೆಯಾದಾಗಿನಿಂದ ಒಂದಲ್ಲಾ ಒಂದು ವಿಚಾರಕ್ಕೆ ಗಲಾಟೆಯಾಗುತ್ತಿತ್ತು.

ಬುಧವಾರ ಶ್ರೀಕಾಂತ್ ತನ್ನ ತಂದೆ, ತಾಯಿ ಜೊತೆ ಗಲಾಟೆ ಮಾಡಿಕೊಂಡು ಶ್ರೀರಂಗಪಟ್ಟಣ ಸಮೀಪದ ಮರಳಗಾಲ ಗ್ರಾಮದ ವಿರುಪಾಕ್ಷ ಎಂಬವರ ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಅತ್ತೆ-ಮಾವನ ಮನೆಗೆ ಬಂದಿದ್ದಾರೆ. ಬಳಿಕ ಇಲ್ಲೇ ಒಂದು ಕೆಲಸ ಕೊಡಿಸಿ ನಾವು ಇಲ್ಲಿಯೇ ಇರುತ್ತೇವೆ ಎಂದು ಶ್ರೀಕಾಂತ್ ಹೇಳಿದ್ದಾನೆ. 

ಇದಕ್ಕೆ ಅತ್ತೆ-ಮಾವ ಸರಿ ಎಂದು ಹೇಳಿ ಎಲ್ಲರೂ ಊಟ ಮಾಡಿ ಪ್ರತ್ಯೇಕ ಮನೆಯಲ್ಲಿ ಮಲಗಿದ್ದಾರೆ. ಬೆಳಗಿನ ಜಾವ ಇದ್ದಕ್ಕಿದ್ದ ಹಾಗೆ ಶ್ರೀಕಾಂತ್ ತನ್ನ ಪತ್ನಿ ಲಕ್ಷ್ಮಿಗೆ ಸುತ್ತಿಗೆಯಿಂದ ಹೊಡೆದಿದ್ದಾನೆ. ಹೊಡೆದ ರಭಸಕ್ಕೆ ಲಕ್ಷ್ಮಿ ರಕ್ತದ ಮಡುವಿನಲ್ಲಿ ಒದ್ದಾಡಿದ್ದಾಳೆ. ಬಳಿಕ ಪಕ್ಕದಲ್ಲೇ ಇದ್ದ ಮಕ್ಕಳ ಕುತ್ತಿಗೆ ಕೊಯ್ದು ಹತ್ಯೆ ಮಾಡಿ ಶ್ರೀಕಾಂತ್ ಪರಾರಿಯಾಗಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಲೈಮ್ಯಾಕ್ಸ್‌ ಹಂತ ತಲುಪಿದ ಧರ್ಮಸ್ಥಳ ಬುರುಡೆ ಕೇಸ್‌: ಎಸ್‌ಐಟಿ ಚಾರ್ಜ್‌ಶೀಟ್‌ನತ್ತ ಎಲ್ಲರ ಚಿತ್ತ

Karur Stampede: ಸ್ವತಂತ್ರ ತನಿಖೆ ಕೋರಿ ಸುಪ್ರೀಂ ಕೋರ್ಟ್‌ ಕದ ತಟ್ಟಿದ ನಟ ವಿಜಯ್‌ ಪಕ್ಷ

ಪಟಾಕಿ ಕಾರ್ಖಾನೆಯಲ್ಲಿ ಮತ್ತೊಂದು ದುರಂತ: ಸ್ಫೋಟ ಸಂಭವಿಸಿ ಆರು ಮಂದಿ ಕಾರ್ಮಿಕರು ಸಜೀವ ದಹನ

ಪಾಕ್‌ನಲ್ಲಿ ರಕ್ತದೋಕುಳಿ: ಎನ್‌ಕೌಂಟರ್‌ ವೇಳೆ 11 ಯೋಧರು ಸೇರಿ 30 ಮಂದಿ ಸಾವು

ಕಮಲದ ವಿನ್ಯಾಸದಲ್ಲಿ ತಯಾರಾದ ಮುಂಬೈನ ಹೊಸ ವಿಮಾನ ನಿಲ್ದಾಣ ಉದ್ಘಾಟಿಸಿದ ಮೋದಿ

ಮುಂದಿನ ಸುದ್ದಿ
Show comments