Publish Date: Wed, 15 Nov 2023 (21:08 IST)
Updated Date: Wed, 15 Nov 2023 (21:34 IST)
ಪತ್ನಿ ಹೆಸರಿನಲ್ಲಿದ್ದ ಕೋಟ್ಯಂತರ ರು. ಮೌಲ್ಯದ ಆಸ್ತಿ ಆಸೆಗಾಗಿ ಆಕೆ ಮಲಗಿದ್ದ ಸಮಯದಲ್ಲಿ ಉಸಿರುಗಟ್ಟಿಸಿ ಪತಿಯೇ ಹತ್ಯೆಗೈದಿರುವ ಘಟನೆ ನಗರದ ವಿ.ವಿ.ನಗರ ಬಡಾವಣೆಯಲ್ಲಿ ನಡೆದಿದೆ. ಎಸ್.ಶೃತಿ ಎಂಬಾಕೆಯೇ ಕೊಲೆಯಾದವಳು. ಟಿ.ಎನ್.ಸೋಮಶೇಖರ್ ಎಂಬಾತನೇ ಕೊಲೆ ಮಾಡಿದ ಪತಿ. ಕೊಲೆಯಾದ ಎಸ್.ಶೃತಿ ಹೆಸರಿನಲ್ಲಿ ಮೈಸೂರಿನಲ್ಲಿ ಕೋಟ್ಯಂತರ ರು. ಬೆಲೆಬಾಳುವ ಆಸ್ತಿ ಇದ್ದು, ಈ ಆಸ್ತಿಯಲ್ಲಿ ಒಂದು ಆಸ್ತಿಯನ್ನು ಮಾರಾಟ ಮಾಡಲು ಆಕೆ ಪ್ರಯತ್ನಿಸುತ್ತಿದ್ದರಿಂದ ಇದನ್ನು ಒಪ್ಪದ ಪತಿ ಸೋಮಶೇಖರ್ ಎಲ್ಲ ಆಸ್ತಿಯನ್ನು ತನ್ನದಾಗಿಸಿಕೊಳ್ಳುವ ಉದ್ದೇಶದಿಂದ ನ.10ರಂದು ರಾತ್ರಿ ಮಲಗಿದ್ದ ಸಮಯದಲ್ಲಿ ದಿಂಬು ಮತ್ತು ಬೆಡ್‌ಶೀಟನ್ನು ಶೃತಿಯ ಮುಖದ ಮೇಲೆ ಬಿಗಿಯಾಗಿ ಅದುಮಿ, ಉಸಿರುಗಟ್ಟಿಸಿ ಸಾಯಿಸಿರುವುದಾಗಿ ಪೊಲೀಸರೆದರು ತಪ್ಪೊಪ್ಪಿಕೊಂಡಿದ್ದಾನೆ.