Select Your Language

Notifications

webdunia
webdunia
webdunia
webdunia

ಯುವತಿಯ ಶವ ಸೂಟ್‌ಕೇಸ್‌ನಲ್ಲಿ ತುಂಬಿ ರೈಲಿನಿಂದ ಎಸೆದ ಪಾಪಿಗಳು: ರೈಲ್ವೆ ಸೇತುವೆ ಬಳಿ ಪತ್ತೆ

Karnataka Police, young woman's body found in suitcase, old Chandapur railway bridge

Sampriya

ಬೆಂಗಳೂರು , ಬುಧವಾರ, 21 ಮೇ 2025 (17:54 IST)
Photo Courtesy X
ಬೆಂಗಳೂರು: ಯುವತಿಯನ್ನು ಕೊಲೆ ಮಾಡಿ ಶವನ್ನು ಸೂಟ್‌ಕೇಟ್‌ನಲ್ಲಿ ತುಂಬಿ ಚಲಿಸುವ ರೈಲಿನಿಂದ ಹೊರಗೆ ಎಸೆದಿರುವ ಆತಂಕಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ರೈಲ್ವೆ ಸೇತುವೆಯ ಬಳಿ ಬುಧವಾರ ಹರಿದ ನೀಲಿ ಬಣ್ಣದ ಸೂಟ್‌ಕೇಸ್ ಪತ್ತೆಯಾಗಿದೆ. ಅದರಲ್ಲಿ ಯುವತಿಯ ಶವ  ಪತ್ತೆಯಾಗಿದೆ. ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.

ಹಳೆಯ ಚಂದಾಪುರ ರೈಲ್ವೆ ಸೇತುವೆಯ ಬಳಿ ಸ್ಥಳೀಯ ನಿವಾಸಿಗಳು ಸೂಟ್‌ಕೇಸ್ ನ್ನು ಪತ್ತೆಹಚ್ಚಿದ್ದು, ಚಲಿಸುವ ರೈಲಿನಿಂದ ಹೊರಗೆ ಎಸೆದಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಪೊಲೀಸರು ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಿಕೊಳ್ಳುತ್ತಿದ್ದಾರೆ ಮತ್ತು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಮಹಿಳೆಯನ್ನು ಬೇರೆಡೆ ಕೊಲೆ ಮಾಡಲಾಗಿದೆ ಮತ್ತು ಸೂಟ್‌ಕೇಸ್‌ನಲ್ಲಿ ತುಂಬಿದ್ದ ಶವವನ್ನು ಚಲಿಸುವ ರೈಲಿನಿಂದ ಹೊರಗೆ ಎಸೆಯಲಾಗಿದೆ ಎಂದು ಪ್ರಾಥಮಿಕ ತನಿಖೆಯ ಪ್ರಕಾರ ತಿಳಿದುಬಂದಿದೆ.

ಮೃತದೇಹದ ಮೇಲೆ ನಮಗೆ ಯಾವುದೇ ಗುರುತಿನ ದಾಖಲೆಗಳು ಕಂಡುಬಂದಿಲ್ಲ ಮತ್ತು ಮಹಿಳೆಯ ಹೆಸರು, ವಯಸ್ಸು ಮತ್ತು ಅವರು ಎಲ್ಲಿಂದ ಬಂದವರು ಎಂಬ ವಿವರಗಳನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಜೈಲಿನಲ್ಲಿರುವ ಮಾಜಿ ಐಎಎಸ್‌ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್‌ಗೆ ಸುಪ್ರೀಂನಿಂದ ಕೊನೆಗೂ ಬಿಗ್‌ ರಿಲೀಫ್‌