Select Your Language

Notifications

webdunia
webdunia
webdunia
webdunia

ಸರ್. ಎಂ. ವಿಶ್ವೇಶ್ವರಯ್ಯ ಮೊಮ್ಮಗಳು ಚುನಾವಣೆಗೆ ಎಂಟ್ರಿ..!!

ಸರ್. ಎಂ. ವಿಶ್ವೇಶ್ವರಯ್ಯ ಮೊಮ್ಮಗಳು ಚುನಾವಣೆಗೆ ಎಂಟ್ರಿ..!!
bangalore , ಮಂಗಳವಾರ, 19 ಜುಲೈ 2022 (16:40 IST)
ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಅವರ ಮೊಮ್ಮಗಳು ಶೀಲಾ ಮೋಹನ್, ಅಮೆರಿಕದ ಸಿಟಿ ಕೌನ್ಸಿಲ್ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.
 
ಬೆಂಗಳೂರಿನಲ್ಲಿ ಜನಿಸಿದ ಶೀಲಾ ಮೋಹನ್, ಆಪಲ್ ಸಂಸ್ಥೆಯ ಕೇಂದ್ರ ಕಚೇರಿಯಿರುವ ಕ್ಯಾಲಿಫೋರ್ನಿಯಾದ ಕ್ಯುಪರ್ಟಿನೋ ನಗರದಿಂದ ಚುನಾವಣೆ ಎದುರಿಸಲು ನಿರ್ಧರಿಸಿದ್ದಾರೆ.
ಕಳೆದ 30 ವರ್ಷಗಳಿಂದ ಅಮೆರಿಕಾ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
 
ಅಮೆರಿಕಾದಲ್ಲಿ ಸಿಟಿ ಕೌನ್ಸಿಲ್ ನೀತಿ ನಿರೂಪಣಾ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇದೀಗ ಅವರು ಇಲ್ಲಿನ ಚುನಾವಣಾ ಅಖಾಡಕ್ಕೆ ಧುಮುಕುತ್ತಿದ್ದಾರೆ.
 
ಕೆಲದಿನಗಳ ಹಿಂದೆ ಬೆಂಗಳೂರಿಗೆ ಭೇಟಿ ನೀಡಿದ್ದ ಶೀಲಾ, ಸರ್ ಎಂ. ವಿಶ್ವೇಶ್ವರಯ್ಯ ಅವರು ಮಾಜಿ ಪ್ರಧಾನಿ ನೆಹರೂ ಅವರೊಂದಿಗೆ ತೆಗೆಸಿಕೊಂಡಿದ್ದ ಫೋಟೊ ಹಿಡಿದು, ಗತಕಾಲದ ನೆನಪುಗಳನ್ನು ಮೆಲುಕು ಹಾಕಿಕೊಂಡರು.

Share this Story:

Follow Webdunia kannada

ಮುಂದಿನ ಸುದ್ದಿ

ಅತ್ತೆಯನ್ನು ಸುತ್ತಿಗೆಯಲ್ಲಿ ಹೊಡೆದು ಸಾಯಿಸಿದ ಅಳಿಯ..