ಎಸ್ ಐಆರ್ ವಿಚಾರದಲ್ಲಿ ಆರೋಪ ಆತಂಕ ಪಡುವುದು ಏನೂ ಇಲ್ಲ

ಸಂಪ್ರಿಯ
ಮಂಗಳವಾರ, 7 ಜುಲೈ 2026 (18:25 IST)
ಬೆಂಗಳೂರು: ಎಸ್‌ಐಆರ್ ಪ್ರಕ್ರಿಯೆ ವಿಚಾರದಲ್ಲಿ ಬಿಜೆಪಿ- ಜೆಡಿಎಸ್‌ನವರು ದೂರು ಕೊಟ್ಟಿದ್ದಾರೆ. ತನಿಖೆಯಾಗಲಿ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವರು,  ಎಸ್ ಐಆರ್ ವಿಚಾರದಲ್ಲಿ ಆರೋಪ ಆತಂಕ ಪಡುವುದು ಏನೂ ಇಲ್ಲ. ಈಗಾಗಲೇ ದೂರು ಕೊಟ್ಟಿದ್ದು, ಈ ಸಂಬಂಧ ತನಿಖೆಯಾಗಲಿ. ನಮ್ಮ ದೃಷ್ಟಿಯಲ್ಲಿ ಎಲ್ಲರನ್ನೂ ಸೇರಿಸುತ್ತಿದ್ದೇವೆ. ಎಲ್ಲರನ್ನೂ ರಕ್ಷಣೆ ಮಾಡುವ ಕೆಲಸ ಮಾಡುತ್ತಿದ್ದೇವೆ. ಎಲ್ಲರೂ ಮತದಾರರ ಪಟ್ಟಿಯಲ್ಲಿ ಇರಬೇಕು ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದಲ್ಲಿ ಹೊಸ ಬದಲಾವಣೆ ಆಗಬೇಕು. ಈ ಸಂಬಂಧ ಪಕ್ಷದ ಅಧ್ಯಕ್ಷರು ಸಾಕಷ್ಟು ಬದಲಾವಣೆ ಬಗ್ಗೆ ಚಿಂತಿಸುತ್ತಿದ್ದಾರೆ.  ಹೊಸಬರಿಗೆ ಅವಕಾಶ ಕೊಡಬೇಕು ಏನು ಚರ್ಚೆ ಆಗುತ್ತಿದೆ ನೋಡೋಣ ಎಂದು ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಸರ್ವಸದಸ್ಯರ ಸಭೆ ಬಗ್ಗೆ ಹೇಳಿದರು.

ಸಿಎಂ ಡಿಕೆ ಶಿವಕುಮಾರ್ ಅವರ ಬಳಿ ಪ್ರಸ್ತುತ ಸುಮಾರು 20 ಸಚಿವ ಸ್ಥಾನಗಳು ಖಾಲಿ ಇರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ನಡೆಯುವ ನಿರೀಕ್ಷೆಯಿದ್ದು, ಇದಕ್ಕೆ ಸತೀಶ್ ಜಾರಕಿಹೊಳಿ ಸೇರಿದಂತೆ ಕಾಂಗ್ರೆಸ್‌ನ ಹಿರಿಯ ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಸಂಪುಟ ವಿಸ್ತರಣೆ ವಿಷಯ ನಮ್ಮ ಕೈಯಲ್ಲಿಲ್ಲ ಹೈಕಮಾಂಡ್ ತೀರ್ಮಾನ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೋಸಗಾಗಿ ರೈಲು ನಿಲ್ಲಿಸಲಿಲ್ಲ: ರೈಲ್ವೇ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರಿನ ಆಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ

ನಿರಂಜನ್ ಇನ್ನಿಲ್ಲ ಎಂಬ ಸುದ್ದಿ ನನ್ನ ಹೃದಯವನ್ನು ಆಳವಾಗಿ ಅಲುಗಾಡಿಸಿದೆ

ವೈದ್ಯರ ಮೇಲಿನ ಹಲ್ಲೆ ಪ್ರಕರಣ, ಶಿವಸೇನಾ ಸೇನಾ ಕಾರ್ಪೋರೇಟರ್‌ ಮಹೇಶ್ ಮ್ಹಾತ್ರೆ ಅರೆಸ್ಟ್

ನಿರಂತರ ಮಳೆಗೆ ಕುಸಿದ ಬೃಹತ್ ಕಟ್ಟಡ, 19ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಮುಂದಿನ ಸುದ್ದಿ
Show comments