Select Your Language

Notifications

webdunia
webdunia
webdunia
webdunia

ಮಹಿಳೆಯರಿಗೆ ಕಿರುಕುಳ ನೀಡಿದ ಆರೋಪಿ ಪ್ರಜ್ವಲ್ ರೇವಣ್ಣ ಲೇಡಿ ಆಫೀಸರ್ ಗಳಿಂದಲೇ ಲಾಕ್

Prajwal Revanna

Krishnaveni K

ಬೆಂಗಳೂರು , ಶುಕ್ರವಾರ, 31 ಮೇ 2024 (09:13 IST)
ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಕ್ಕೊಳಗಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ವಿಶೇಷವೆಂದರೆ ಲೇಡಿ ಆಫೀಸರ್ ಗಳೇ ಪ್ರಜ್ವಲ್ ರೇವಣ್ಣರನ್ನು ಬಂಧಿಸಿ ವಾಹನದಲ್ಲಿ ಕರೆದೊಯ್ದಿದ್ದಾರೆ. ಪ್ರಜ್ವಲ್ ವಿರುದ್ಧ ನೂರಾರು ಮಹಿಳೆಯರಿಗೆ ಲೈಂಗಿಕ ಕಿರುಕುಳ, ಅತ್ಯಾಚಾರವೆಸಗಿದ ಆರೋಪವಿದೆ.

ಆರೋಪ ಬೆಳಕಿಗೆ ಬಂದ ಬೆನ್ನಲ್ಲೇ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಈಗಷ್ಟೇ ರಾಜಕೀಯ ಒತ್ತಡಗಳ ಬಳಿಕ ಬೆಂಗಳೂರಿಗೆ ಮರಳಿದ್ದಾರೆ. ವಿಮಾನ ನಿಲ್ದಾಣದಲ್ಲೇ ಎಸ್ ಐಟಿ ಅಧಿಕಾರಿಗಳು ಅವರನ್ನು ಬಂಧಿಸಿ ತಮ್ಮೊಂದಿಗೆ ಕರೆದೊಯ್ದಿದ್ದಾರೆ.

ಬಂಧನದ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಅಧಿಕಾರಿಗಳೇ ಇದ್ದಿದ್ದು ವಿಶೇಷ. ಪ್ರಜ್ವಲ್ ರನ್ನು ಕರೆದೊಯ್ದ ವಾಹನದಲ್ಲಿ ಪ್ರಜ್ವಲ್ ಅಕ್ಕಪಕ್ಕದಲ್ಲಿ ಎಲ್ಲಾ ಮಹಿಳಾ ಪೊಲೀಸ್ ಅಧಿಕಾರಿಗಳೇ ಇದ್ದರು. ಎಸ್ಐಟಿ ತಂಡದಲ್ಲಿ ಒಟ್ಟು ಐವರು ಮಹಿಳಾ ಅಧಿಕಾರಿಗಳಿದ್ದಿದ್ದು ವಿಶೇಷ.

Share this Story:

Follow Webdunia kannada

ಮುಂದಿನ ಸುದ್ದಿ

ಲೈಂಗಿಕ ದೌರ್ಜನ್ಯ ಪ್ರಕರಣ: ವಿಮಾನ ನಿಲ್ದಾಣದಲ್ಲೇ ಸಂಸದ ಪ್ರಜ್ವಲ್ ರೇವಣ್ಣ ಬಂಧನ