Publish Date: Thu, 25 Nov 2021 (20:46 IST)
Updated Date: Thu, 25 Nov 2021 (20:48 IST)
ಉತ್ತರ ಪ್ರದೇಶದ ಗೌತಮಬುದ್ಧ ನಗರದ ಜೇವಾರ್ನಲ್ಲಿ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ಮಾಡಿದ್ದಾರೆ.ಈ ವಿಮಾನ ನಿಲ್ದಾಣದ ಮೊದಲ ಹಂತದ ಅಭಿವೃದ್ಧಿ ಕಾರ್ಯ 10,050 ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ನಡೆಯುತ್ತಿದೆ. 1300 ಹೆಕ್ಟೇರ್ಗೂ ಹೆಚ್ಚಿನ ವಿಸ್ತೀರ್ಣದ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗ್ತಿದೆ..ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ಮಾಡಿದ ನಂತರ ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಇದು ದೆಹಲಿ-ಎನ್‌ಸಿಆರ್ ಮತ್ತು ಪಶ್ಚಿಮ ಉತ್ತರ ಪ್ರದೇಶದ ಕೋಟ್ಯಂತರ ಜನರಿಗೆ ಪ್ರಯೋಜನವನ್ನು ನೀಡುತ್ತದೆ..ಈ ಯೋಜನೆಯಿಂದ ಜನರ ಜೀವನವನ್ನು ಸಂಪೂರ್ಣವಾಗಿ ಪರಿವರ್ತಿಸುತ್ತದೆ. ಶೀಘ್ರದಲ್ಲೇ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ ಸಿದ್ಧವಾಗಲಿದೆ ಎಂದು ಹೇಳಿದ್ದಾರೆ.