ಕಲಬುರಗಿಯಲ್ಲಿ ಮತ್ತೆ ಆರು ಕೊರೋನಾ ಸೋಂಕು ದೃಢ

Webdunia
ಭಾನುವಾರ, 3 ಮೇ 2020 (21:09 IST)
ಕಲಬುರಗಿ ನಗರದಲ್ಲಿ ಮತ್ತೆ ಆರು ಕೊರೋನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ.

ಇದರಿಂದ ಸೋಂಕು ಪೀಡಿತರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ. ಕಲಬುರಗಿ‌ ನಗರದ ರೋಗಿ ಸಂಖ್ಯೆ-532ರ ಸಂಪರ್ಕದಲ್ಲಿ ಬಂದ ಮೋಮಿನಪುರ ಪ್ರದೇಶದ13 ವರ್ಷದ ಬಾಲಕಿ ಮತ್ತು 54 ವರ್ಷದ ಪುರುಷನಿಗೆ ಹಾಗೂ ಇದೇ ಪ್ರದೇಶದ ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯ 41 ವರ್ಷದ ಪುರುಷನಿಗೂ ಕೊರೋನಾ ಸೋಂಕು ಕಂಡುಬಂದಿದೆ.

ಇದಲ್ಲದೆ ILI ಹಿನ್ನೆಲೆಯಿಂದ ಮಿಲನ್‌ ಚೌಕ್ ಪ್ರದೇಶದ 35 ವರ್ಷದ ಯುವತಿ ಮತ್ತು ಗಾಜೀಪುರ ಪ್ರದೇಶದ 78 ವರ್ಷದ ವೃದ್ಧನಿಗೂ ಕೋವಿಡ್-19 ಸೋಂಕು ತಗುಲಿದೆ. ಸಂತ್ರಾಸವಾಡಿ ಪ್ರದೇಶದ 22 ವರ್ಷದ ಯುವಕನಿಗೂ ಕೊರೋನಾ ಸೋಂಕು ದೃಢವಾಗಿರುವ ಹಿನ್ನೆಲೆಯಲ್ಲಿ ಈತನಿಗೆ ಸೋಂಕು ಹೇಗೆ ತಗುಲಿತು ಎಂಬುದರ ಬಗ್ಗೆ ಪತ್ತೆ ಕಾರ್ಯಾಚರಣೆ ಮುಂದುವರೆದಿದೆ.

ಜಿಲ್ಲೆಯಲ್ಲಿ ಕೊರೋನಾ ಸೋಂಕು ಪೀಡಿತ 61 ಜನರಲ್ಲಿ ಇದೂವರೆಗೆ 18 ರೋಗಿಗಳು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಳಿದಂತೆ 5 ಜನ ನಿಧನ ಹೊಂದಿದ್ದು, 38 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಸಾಂಪ್ರದಾಯಿಕ ಪಟಾಕಿಗಳ ಅಬ್ಬರಕ್ಕೆ ಸುಪ್ರೀಂ ಕೋರ್ಟ್‌ ಬ್ರೇಕ್

ಡಿ.ಕೆ.ಶಿವಕುಮಾರ್‌ ಬೆನ್ನಲ್ಲೇ ಹಾಸನಾಂಬೆಯ ಆಶೀರ್ವಾದ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಆಯುರ್ವೇದ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ನಿಧನ: ಮೋದಿ ಸಂತಾಪ

ಹೃದಯಸ್ತಂಭನ: ಗೋವಾದ ಎರಡು ಬಾರಿಯ ಮುಖ್ಯಮಂತ್ರಿ, ಹಾಲಿ ಸಚಿವ ರವಿ ನಾಯ್ಕ್ ನಿಧನ

ಆರೆಸ್ಸೆಸ್ ಬೆದರಿಕೆ ಕರೆ ಎಂದು ತೋರಿಸಿದ ಪ್ರಿಯಾಂಕ್ ಖರ್ಗೆಗೆ ನಿಮ್ಮ ನಂಬರ್ ಸುಲಭಕ್ಕೆ ಸಿಗುತ್ತಾ ಎಂದು ಪ್ರಶ್ನಿಸಿದ ಪಬ್ಲಿಕ್

ಮುಂದಿನ ಸುದ್ದಿ
Show comments