Select Your Language

Notifications

webdunia
webdunia
webdunia
webdunia

ಸುಹಾಸ್ ಶೆಟ್ಟಿ ಬೆನ್ನಲ್ಲೇ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಹತ್ಯೆಗೆ ಸ್ಕೆಚ್‌: ನಾಳೆಯೇ ಡೇಟ್‌ ಫಿಕ್ಸ್‌ ಎಂದು ಪೋಸ್ಟ್‌

Suhas Shetty murder case, Hindu activist Bharat Kumdale, Dakshina Kannada district

Sampriya

ಮಂಗಳೂರು , ಭಾನುವಾರ, 4 ಮೇ 2025 (13:46 IST)
Photo Courtesy X
ಮಂಗಳೂರು: ಕೋಮು ಸಂಘರ್ಷದಿಂದ ಕರಾವಳಿ ಬೂದಿಮುಚ್ಚಿದ ಕೆಂಡದಂತಿದೆ. ಜಿಲ್ಲೆಯಲ್ಲಿ ಹಾಕಲಾಗಿದ್ದ ನಿಷೇಧಾಜ್ಞೆಯನ್ನು ವಾಪಸ್‌ ಪಡೆಯಲಾಗಿದೆ. ಈ ಮಧ್ಯೆ ಮತ್ತೊಬ್ಬ ಹಿಂದೂ ಕಾರ್ಯಕರ್ತನಿಗೆ ಕೊಲೆ ಬೆದರಿಕೆ ಹಾಕಲಾಗಿದೆ.

ಹಿಂದೂ ಕಾರ್ಯಕರ್ತ, ರೌಡಿಶೀಟರ್‌ ಸುಹಾಸ್ ಶೆಟ್ಟಿ ಬೆನ್ನಲ್ಲೇ ಮತ್ತೊಬ್ಬ ಹಿಂದೂ ಮುಖಂಡನ ಹತ್ಯೆಗೆ ಸ್ಕೆಚ್‌ ಹಾಕಲಾಗಿದೆ. ಹಿಂದೂ ಕಾರ್ಯಕರ್ತ ಭರತ್ ಕುಮ್ಡೇಲ್‌ಗೆ ಜೀವ ಬೆದರಿಕೆ ಹಾಕಲಾಗಿದೆ. ದಿನಾಂಕ ಫಿಕ್ಸ್ ಮಾಡಿದ ಪೋಸ್ಟ್‌ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಹಿಂದೂ ಮುಖಂಡ ಭರತ್ ಕುಮ್ಡೇಲ್‌ ಅವರನ್ನು 5/5/2025 ರಾತ್ರಿ 9:30ಕ್ಕೆ ನಿನ್ನ ಸ್ಥಳದಲ್ಲೇ ಕೊಲೆ ಮಾಡುವುದಾಗಿ ಪೋಸ್ಟ್ ಹರಿಬಿಡಲಾಗಿದೆ. ಈ ಹಿಂದೆ ಸುಹಾಸ್ ಶೆಟ್ಟಿ ಪೋಟೋಗೆ ರೈಟ್ ಚಿಹ್ನೆ ಹಾಕಿ ಹಂತಕರು ವಿಕೃತಿ ಮೆರೆದಿದ್ದರು.  

 ಭರತ್ ಕುಮ್ಡೇಲು ಅವರು ಎಸ್‌ಡಿಪಿಐ ಮುಖಂಡ ಅಶ್ರಫ್ ಕಲಾಯಿ ಹತ್ಯೆಯ ಪ್ರಮುಖ ಆರೋಪಿಯಾಗಿದ್ದಾರೆ. 2017ರ ಜೂನ್ 21 ರಂದು ಅಶ್ರಫ್ ಹತ್ಯೆಯಾಗಿತ್ತು. ಬಂಟ್ವಾಳದ ಬೆಂಜನಪದವು ಎಂಬಲ್ಲಿ ಅಶ್ರಫ್ ಬರ್ಬರವಾಗಿ ಹತ್ಯೆಗೀಡಾಗಿದ್ದ. ಎಸ್‌ಡಿಪಿಐನಲ್ಲಿ ಅಶ್ರಫ್ ಮುಂಚೂಣಿಯಲ್ಲಿದ್ದ. ಆತನ ಹತ್ಯೆ ಬಳಿಕ ಪ್ರತೀಕಾರವಾಗಿ ಬಂಟ್ವಾಳದ ಶರತ್ ಮಡಿವಾಳ ಹತ್ಯೆಯಾಗಿತ್ತು.

ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಶರಣ್ ಪಂಪ್ವೆಲ್, ಭರತ್ ಕುಮ್ಡೇಲ್‌ಗೆ ಜೀವ ಬೆದರಿಕೆ ಹಾಕಲಾಗಿದೆ. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್ ಎಂದು ಪೋಸ್ಟ್ ಹರಿಬಿಡಲಾಗಿದೆ. ಪೊಲೀಸ್ ಇಲಾಖೆಯ ಕ್ರಮದ ನಡುವೆ ದ್ವೇಷ ಕಾರುವ ಪೋಸ್ಟ್ ಹಾಕಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತದ ಪ್ರಧಾನಿ ಮೋದಿ ನನ್ನ ಚಿಕ್ಕಮ್ಮನ ಮಗನೇ: ಪಾಕ್‌ ಸಂಸದ ವ್ಯಂಗ್ಯದ ಮಾತು ಹೇಳಿದ್ದೇಕೆ