ಶಾಲೆ ಬಿಟ್ಟ ಮಕ್ಕಳಿಗೆ 19 ರಿಂದ 29 ವಯೋಮಾನದವರೆಗಿನ ಆಯ್ದ ಕೌಶಲ್ಯಗಳನ್ನು ಒದಗಿಸಿ ಅವರಿಗೆ ಔದ್ಯೋಗಿಕ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಶಿಕ್ಷಣ ಮಂತ್ರಾಲಯ ಹಾಗೂ ಕೇಂದ್ರ ಕೌಶಲ್ಯ ಮತ್ತು ಔದ್ಯೋಗಿಕರಣ ಇಲಾಖೆಗಳ ಜಂಟಿ ಸಹಯೋಗದಲ್ಲಿ ಸ್ಕಿಲ್ ಹಬ್ ಇನ್ಸೇಟಿವ್ ಫಾರ್ ಒಒಎಸ್ಸಿ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ವಯೋಮಾನದ ಅಭ್ಯರ್ಥಿಗಳು ತಮ್ಮ ಹೆಸರನ್ನು ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿಗಳು ಉಪ ನಿರ್ದೇಶಕರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಡಿಕೇರಿ ಇಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ 9448999400 ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಶಿಕ್ಷಣ ಕರ್ನಾಟಕ ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿ ಅವರು ತಿಳಿಸಿದ್ದಾರೆ.