ಅತಿ ಬುದ್ದಿವಂತಿಕೆ ಪ್ರದರ್ಶಿಸುವುದು ಬಿಟ್ಟುಬಿಡಿ: ಅಧಿಕಾರಿಗಳಿಗೆ ಸಿಎಂ ವಾರ್ನಿಂಗ್

Webdunia
ಮಂಗಳವಾರ, 28 ಜೂನ್ 2016 (12:49 IST)
ಉನ್ನತ ಹುದ್ದೆಗಳನ್ನು ಅಲಂಕರಿಸಿರುವ ಅಧಿಕಾರಿಗಳು ಅತಿ ಬುದ್ದಿವಂತಿಕೆ ಪ್ರದರ್ಶಿಸುವುದು ಬಿಟ್ಟು ಮಾನವೀಯತೆಯಿಂದ ಬಡವರಿಗೆ ಸಹಾಯ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
 
ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಅರಣ್ಯ ಅಧಿಕಾರಿಗಳ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ,  ಅರಣ್ಯ ಕಾಯ್ದೆ ತಿದ್ದುಪಡಿಯನ್ನು ಪರಿಣಾಮಕಾರಿಯಾಗಿ ಜಾರಿಗೆ ತನ್ನಿ. ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಿ. ಯಾವುದೇ ಅರ್ಜಿಯನ್ನು ನೆನೆಗುದಿಯಲ್ಲಿ ಇಡುವುದು ಬೇಡ ಎಂದು ಕಿವಿಮಾತು ಹೇಳಿದ್ದಾರೆ.
 
ಅಧಿಕಾರಿಗಳು ಕೇವಲ ಜಿಲ್ಲಾ ಕೇಂದ್ರಗಳಲ್ಲಿ ಇರುವುದು ಬಿಟ್ಟು ಪ್ರತಿಯೊಂದು ಗ್ರಾಮಕ್ಕೆ ಭೇಟಿ ನೀಡಿ ಜನರ ಕುಂದುಕೊರತೆಗಳನ್ನು ಪರಿಶೀಲಿಸಿ. ನಿಮ್ಮಿಂದ ಯಾವುದಾದರೂ ಅಸಾಧ್ಯವೆನಿಸಿದರೆ ನೇರವಾಗಿ ನನ್ನನ್ನು ಸಂಪರ್ಕಿಸಿ. ಸರಕಾರದದಲ್ಲಿ ಹಣದ ಕೊರತೆಯಿಲ್ಲ. ಯೋಜನೆಗಳ ಜಾರಿಯ ಕೊರತೆಯಾಗಿದೆ ಎಂದರು.
 
ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಚ್ಚಾಶಕ್ತಿಯನ್ನು ಪ್ರದರ್ಶಿಸಿದಲ್ಲಿ ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಸಾಗಿಸುವುದು ಕಷ್ಟವಲ್ಲ. ಅಧಿಕಾರಿ ಕರ್ತವ್ಯನಿಷ್ಠೆಯಿಂದ ಸೇವೆ ಸಲ್ಲಿಸಬೇಕು. ಬೇಜವಾಬ್ದಾರಿ ವರ್ತನೆ ತೋರಿದ ಅಧಿಕಾರಿಗಳಿಗೆ ಕಾದಿದೆ ಕಠಿಣ ಶಿಕ್ಷೆ. ಅಂತಹ ಶಿಕ್ಷೆ ಜಾರಿಗೊಳಿಸಲು ಬಿಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ದಲಿತರಿಗೆ ಮೀಸಲಾಗಿದ್ದ 25,000 ಕೋಟಿ ಗ್ಯಾರಂಟಿಗೆ ಬಳಕೆ: ಒಪ್ಪಿಕೊಂಡ ಸಚಿವ ಮಹದೇವಪ್ಪ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಕಾಂಗ್ರೆಸ್ ಪಾತಾಳಕ್ಕೆ ಕುಸಿಯುತ್ತಿದೆ: ಮಲ್ಲಿಕಾರ್ಜುನ ಖರ್ಗೆ ಬೇಡ, ಪ್ರಿಯಾಂಕ್ ಗಾಂಧಿ ಬಂದ್ರೆ ಸರಿ ಹೋಗುತ್ತೆ

ಮುಂದಿನ ಸುದ್ದಿ
Show comments