ನಿನ್ನೆ ಹೃದಯಾಘಾತದಿಂದ ಸಾವನ್ನಪ್ಪಿದ ಲೇಖಕ ಎಸ್ ಎಲ್ ಭೈರಪ್ಪ ಅವರು ಮಾಡಿರುವ ವಿಲ್ ಕೆಲಕಾಲ ಗೊಂದಲದ ವಾತಾವರಣವನ್ನು ಸೃಷ್ಟಿ ಮಾಡಿತು.
ತಮ್ಮ ಅಂತ್ಯಕ್ರಿಯೆಯನ್ನು ಮಕ್ಕಳಾದ ಉದಯ್ ಶಂಕರ್ ಮತ್ತು ರವಿಶಂಕರ್ ನಡೆಸುವಂತಿಲ್ಲ ಎಂದು ಭೈರಪ್ಪ ಅವರು ಮಾಡಿರುವ ವಿಲ್ ಅನ್ನು ಅಭಿಮಾನಿ ಫಣೀಶ್ ಎಂಬುವರು ಪ್ರದರ್ಶಿಸಿದರು.
ಅದರಿಂದ ಕಲಾಮಂದಿರದ ಆವರಣದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು, ಅವರನ್ನು ಪೊಲೀಸರು ವಶಕ್ಕೆ ಪಡೆದರು.
ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ, ಕಾದಂಬರಿಕಾರ ಪ್ರೊ.ಎಸ್.ಎಲ್.ಭೈರಪ್ಪ (94) ಅವರು ಬೆಂಗಳೂರಿನ ರಾಜರಾಜೇಶ್ವರಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಬುಧವಾರ ಮಧ್ಯಾಹ್ನ 2.38ಕ್ಕೆ ಹೃದಯಾಘಾತದಿಂದ ನಿಧನರಾದರು.
ಹುಟ್ಟೂರು ಸಂತೇಶಿವರದಲ್ಲಿ ನಾಳೆ ಅಂತ್ಯಕ್ರಿಯೆ ನಡೆಯಲಿದೆ.