Daily Horoscope
✕

ಸರ್ಕಾರೀ ಗೌರವಗಳೊಂದಿಗೆ ನೆರವೇರಿದ ಎಸ್ ಎಲ್ ಭೈರಪ್ಪ ಅಂತ್ಯಕ್ರಿಯೆ

Krishnaveni K
ಶುಕ್ರವಾರ, 26 ಸೆಪ್ಟಂಬರ್ 2025 (12:49 IST)
ಮೈಸೂರು: ಮೊನ್ನೆ ಇಹಲೋಕ ತ್ಯಜಿಸಿದ್ದ ಹಿರಿಯ ಬರಹಗಾರ ಪದ್ಮಭೂಷಣ ಎಸ್ಎಲ್ ಭೈರಪ್ಪನವರ ಅಂತಿಮ ಕ್ರಿಯೆಗಳು ಇಂದು ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ.

ಭೈರಪ್ಪನವರ ಕೊನೆಯಾಸೆಯಂತೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆ ನೆರವೇರಿದೆ. ಪಾರ್ಥಿವ ಶರೀರಕ್ಕೆ ಬ್ರಾಹ್ಮಣ ಸಂಪ್ರದಾಯದಂತೆ ವಿಧಿ ವಿಧಾನಗಳನ್ನು ನೆರವೇರಿಸಿದ ನಂತರ ಚಿತೆಗೆ ಅಗ್ನಿಸ್ಪರ್ಶ ಮಾಡಲಾಯಿತು.

ಭೈರಪ್ಪನವರ ಅಂತಿಮ ಇಚ್ಛೆಯಂತೆಯೇ ಅಂತ್ಯ ಕ್ರಿಯೆ ನಡೆದಿದೆ. ಪುತ್ರಿ ಸಹನಾ ವಿಜಯ್ ಕುಮಾರ್ ಪಾರ್ಥಿವ ಶರೀರಕ್ಕೆ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು. ಪುತ್ರರು ಚಿತೆಗೆ ಅಗ್ನಿಸ್ಪರ್ಶ ಮಾಡಿದರು.

ಅವರ ಅಂತ್ಯಕ್ರಿಯೆ ನೆರವೇರಿಸುವ ಬಗ್ಗೆ ಹಲವು ಗೊಂದಲಗಳು ಉಂಟಾಗಿದ್ದವು. ಎಸ್ಎಲ್ ಭೈರಪ್ಪನವರು ಬರೆದಿದ್ದಾರೆನ್ನಲಾದ ವಿಲ್ ಭಾರೀ ಸದ್ದು ಮಾಡಿತ್ತು. ಅವರ ಪುತ್ರರು ಅಂತ್ಯಕ್ರಿಯೆ ಮಾಡಬಾರದು ಎಂದು ವಿಲ್ ನಲ್ಲಿ ಬರೆದಿದ್ದರೆಂದು ಹೇಳಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾತನ ಆಸ್ತಿಯಲ್ಲಿ ಸಿಗುತ್ತೆ ಎಂದುಕೊಂಡಿದ್ದ ಮೊಮ್ಮಕ್ಕಳಿಗೆ ಈ ಹೊಸ ನಿಯಮ ಶಾಕಿಂಗ್

ಆತ್ಮಕತೆಯಲ್ಲಿ ಜೀವನದ ದೊಡ್ಡ ಸೀಕ್ರೆಟ್ ಬಹಿರಂಗಪಡಿಸಿದ ಸೋನಿಯಾ ಗಾಂಧಿ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ

ಕರ್ನಾಟಕದಲ್ಲಿ ವಿಧವಾ ವೇತನ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಅರ್ಹತೆ ಮತ್ತು ಸಂಪೂರ್ಣ ಮಾಹಿತಿ

ಮನೆಯಲ್ಲಿ ಅತ್ತೆ ಸೊಸೆ ಜಗಳವಾಗದಂತೆ ಪುರುಷರು ಏನು ಮಾಡಬೇಕು ಇಲ್ಲಿದೆ ಟಿಪ್ಸ್

ಮುಂದಿನ ಸುದ್ದಿ
Show comments