Select Your Language

Notifications

webdunia
webdunia
webdunia
webdunia

ಎಸ್ ಎಲ್ ಭೈರಪ್ಪ ಅಂತ್ಯ ಕ್ರಿಯೆ ಹೇಗೆ ನಡೆಯಲಿದೆ

SL Bhyrappa

Krishnaveni K

ಮೈಸೂರು , ಶುಕ್ರವಾರ, 26 ಸೆಪ್ಟಂಬರ್ 2025 (09:34 IST)
ಮೈಸೂರು: ಮೊನ್ನೆ ಇಹಲೋಕ ತ್ಯಜಿಸಿದ ಖ್ಯಾತ ಬರಹಗಾರ ಪದ್ಮಭೂಷಣ ಎಸ್ಎಲ್ ಭೈರಪ್ಪನವರ ಅಂತಿಮ ಕ್ರಿಯೆಗಳು ಇಂದು ಮೈಸೂರಿನಲ್ಲಿ ನಡೆಯಲಿದೆ. ಅವರ ಅಂತ್ಯಕ್ರಿಯೆ ಬಗ್ಗೆ ಇಲ್ಲಿದೆ ವಿವರ.

ನಿನ್ನೆಯಿಡೀ ಎಸ್ಎಲ್ ಭೈರಪ್ಪನವರ ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿ ನಾಯಕರಾದ ಆರ್ ಅಶೋಕ್, ಬಿವೈ ವಿಜಯೇಂದ್ರ ಸೇರಿದಂತೆ ಅನೇಕ ಗಣ್ಯರು ಬಂದು ಅಂತಿಮ ದರ್ಶನ ಮಾಡಿಕೊಂಡು ಹೋಗಿದ್ದಾರೆ.

ಇಂದು ಭೈರಪ್ಪನವರ ಕೊನೆಯ ಆಸೆಯಂತೆ ಮೈಸೂರಿನಲ್ಲಿ ಅವರ ಅಂತ್ಯ ಕ್ರಿಯೆ ಸಕಲ ಸರ್ಕಾರೀ ಗೌರವಗಳೊಂದಿಗೆ ನಡೆಯಲಿದೆ. ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ಕ್ರಿಯೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವರು ಅಂತ್ಯಕ್ರಿಯೆಯ ಮೇಲುಸ್ತುವಾರಿ ನೋಡಿಕೊಳ್ಳಲಿದ್ದಾರೆ.

ಇಂದು 11.30 ರ ಸುಮಾರಿಗೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಅಂತಿಮ ವಿಧಿ ವಿಧಾನಗಳು ಆರಂಭವಾಗಲಿದೆ. ಇದಕ್ಕೆ ಮೊದಲು ಮೈಸೂರಿನ ಕುವೆಂಪು ನಗರದಲ್ಲಿರುವ ಮನೆಯಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿದೆ ಎಂದು ತಿಳಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಔಷಧಿಯನ್ನೂ ಬಿಟ್ಟಿಲ್ಲ: ಭಾರತದ ಮೇಲೆ ಮತ್ತೊಂದು ಸುಂಕದ ಬರೆ ಹಾಕಿದ ಡೊನಾಲ್ಡ್ ಟ್ರಂಪ್