Publish Date: Sun, 04 Jul 2021 (14:46 IST)
Updated Date: Sun, 04 Jul 2021 (14:51 IST)
ಮಂಡ್ಯ ಜಿಲ್ಲೆಯ ಹಿರಿಯ ರಾಜಕೀಯ ನಾಯಕರು, ಕಾವೇರಿ ಹೋರಾಟಗಾರರು, ಮಾಜಿ ಲೋಕಸಭಾ ಸದಸ್ಯರು ಹಾಗು ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷರಾದ ಶ್ರೀ ಜಿ.ಮಾದೇಗೌಡರವರು ಅನಾರೋಗ್ಯ ದಿಂದ ಆಸ್ಪತ್ರೆಗೆ ದಾಖಲಾಗಿದ್ದು ಅವರನ್ನು ಮಾಜಿ ಮುಖ್ಯ ಮಂತ್ರಿ ಗಳಾದ ಶ್ರೀ ಎಸ್.ಎಂ.ಕೃಷ್ಣ ರವರು ಬೇಟಿ ಮಾಡಿದ್ದರು.
ಮಾದೇಗೌಡರೊಂದಿಗೆ ಪ್ರಥಮ ಬಾರಿಗೆ ಶಾಸನಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದ
ರವರು ತಮ್ಮ ಬಹುಕಾಲದ ಒಡನಾಡಿಯ ಆರೋಗ್ಯ ವಿಚಾರಿಸಿ ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದರು.
ತೀವ್ರ ಅನಾರೋಗ್ಯ ದಿಂದ ಕಳೆದ ಹಲವು ದಿನಗಳಿಂದ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾದೇಗೌಡರು ಮಂಡ್ಯ ಜಿಲ್ಲೆಯ ರಾಜಕಾರಣದಲ್ಲಿ ಶಾಸನಸಭೆ, ಲೋಕಸಭಾ ಸದಸ್ಯರಾಗಿ, ರೈತ ಪರ ಹೋರಾಟಗಾರರಾಗಿ ಜಿಲ್ಲೆಯ ಅಭಿವೃದ್ಧಿಗೆ ಎಸ್.ಎಂ.ಕೃಷ್ಣ ರವರ ಜೊತೆ ಶ್ರಮಿಸಿದವರು. ಮಂಡ್ಯದಲ್ಲಿ ಗಾಂಧಿ ಭವನ ನಿರ್ಮಿಸಿದ್ದರು,
ಎಸ್.ಎಂ.ಕೃಷ್ಣ ರವರ ಭೇಟಿ ಸಮಯದಲ್ಲಿ ಮಾದೇಗೌಡರ ಪುತ್ರ ಮಧುಮಾದೇಗೌಡ ಹಾಜರಿದ್ದರು