Select Your Language

Notifications

webdunia
webdunia
webdunia
webdunia

ಐಟಿ-ಬಿಟಿ ಕ್ಷೇತ್ರಕ್ಕೆ ಎಸ್‌ಎಂ ಕೃಷ್ಣ ಕೊಡುಗೆ ಅಪಾರ: ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ

EX Chief Minister SM Krishna No More, Chief Minister Siddaramaiah, SM Krishna Contribution For IT BT

Sampriya

ಬೆಂಗಳೂರು , ಮಂಗಳವಾರ, 10 ಡಿಸೆಂಬರ್ 2024 (11:34 IST)
Photo Courtesy X
ಬೆಂಗಳೂರು: ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ  ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

ಎಸ್‌ಎಂ ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವರು ಬರೆದುಕೊಂಡಿದ್ದಾರೆ.

ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ‌ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ
ಹಿತೈಷಿಗಳಾಗಿದ್ದರು.

ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ.

ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ‌ ನಾನೂ  ಭಾಗಿಯಾಗಿದ್ದೇನೆ.‌ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಸ್‌ಎಂ ಕೃಷ್ಣ ನಿಧನಕ್ಕೆ ನಾಳೆ ಸರ್ಕಾರಿ ರಜೆ, ಮೂರು ದಿನ ಶೋಕಾಚರಣೆ