Webdunia - Bharat's app for daily news and videos

Install App

ಐಟಿ-ಬಿಟಿ ಕ್ಷೇತ್ರಕ್ಕೆ ಎಸ್‌ಎಂ ಕೃಷ್ಣ ಕೊಡುಗೆ ಅಪಾರ: ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ

Sampriya
ಮಂಗಳವಾರ, 10 ಡಿಸೆಂಬರ್ 2024 (11:34 IST)
Photo Courtesy X
ಬೆಂಗಳೂರು: ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ  ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

ಎಸ್‌ಎಂ ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವರು ಬರೆದುಕೊಂಡಿದ್ದಾರೆ.

ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ‌ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ
ಹಿತೈಷಿಗಳಾಗಿದ್ದರು.

ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ.

ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ‌ ನಾನೂ  ಭಾಗಿಯಾಗಿದ್ದೇನೆ.‌ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments