Select Your Language

Notifications

webdunia
webdunia
webdunia
webdunia

ಎಸ್.ಎಂ.ಕೃಷ್ಣ ಕಾಂಗ್ರೆಸ್ ತೊರೆದಿರುವುದು ದುರದೃಷ್ಟಕರ: ಲಕ್ಷ್ಮೀ ಹೆಬಾಳ್ಕರ್

ಎಸ್.ಎಂ.ಕೃಷ್ಣ ಕಾಂಗ್ರೆಸ್ ತೊರೆದಿರುವುದು ದುರದೃಷ್ಟಕರ: ಲಕ್ಷ್ಮೀ ಹೆಬಾಳ್ಕರ್
ರಾಯಚೂರು , ಸೋಮವಾರ, 30 ಜನವರಿ 2017 (16:13 IST)
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಕಾಂಗ್ರೆಸ್ ಪಕ್ಷ ತೊರೆದಿರುವುದು ದುರದೃಷ್ಟಕರ ಎಂದು ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬಾಳ್ಕರ್ ತಿಳಿಸಿದ್ದಾರೆ.
 
ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ಹಿಂಪಡೆಯುವಂತೆ ಪಕ್ಷದ ಪರಿಷ್ಠರು  ಎಸ್.ಎಂ.ಕೃಷ್ಣ ಅವರ ಮನವೊಲಿಕೆಗೆ ಮುಂದಾಗಿದ್ದಾರೆ. ಹಾಗೆಯೇ ಸಂಸದ ಪ್ರಕಾಶ್ ಹುಕ್ಕೇರಿ ಅವರು ಕಾಂಗ್ರೆಸ್ ಪಕ್ಷ ತೊರೆಯುತ್ತಾರೆ ಎನ್ನುವುದು ಊಹಾಪೋಹ ಎಂದರು.
 
ದುರುದ್ದೇಶದಿಂದ ಕಾಂಗ್ರೆಸ್ ನಾಯಕರ ನಿವಾಸದ ಮೇಲೆ ಐಟಿ ದಾಳಿ ಮಾಡಿಸಲಾಗಿದೆ. ಹಾಗೂ ಐಟಿ ದಾಳಿ ವೇಳೆ ನನ್ನ ನಿವಾಸದಲ್ಲಿ 165 ಕೋಟಿ ರೂಪಾಯಿ ಅಕ್ರಮ ಸಂಪತ್ತು ಪತ್ತೆಯಾಗಿದೆ ಎಂದು ಸುಳ್ಳು ಪ್ರಜಾರ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.
 
ಆದಾಯ ತೆರಿಗೆ ಇಲಾಖೆ ದಾಳಿ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ರಾಜೀನಾಮೆ ಕೇಳಿದರೆ, ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬಾಳ್ಕರ್ ತಿಳಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನೇತಾಜಿ ನಮಗಾಗಿ ಪ್ರಚಾರ ನಡೆಸುತ್ತಾರೆ: ಅಖಿಲೇಶ್ ವಿಶ್ವಾಸ