Publish Date: Tue, 10 Apr 2018 (10:17 IST)
Updated Date: Tue, 10 Apr 2018 (10:19 IST)
ಬೆಂಗಳೂರು: ಕಾಂಗ್ರೆಸ್ ನಲ್ಲಿ ಸೂಕ್ತ ಸ್ಥಾನ ಮಾನ ಸಿಗಲಿಲ್ಲ ಎಂದು ಬೇಸರಿಸಿಕೊಂಡಿದ್ದ ಮಾಜಿ ಸಿಎಂ ಎಸ್ ಎಂ ಕೃಷ್ಣ ಬಿಜೆಪಿ ಸೇರಿದ್ದರು. ಆದರೆ ಇದೀಗ ಬಿಜೆಪಿಯಲ್ಲೂ ಸೂಕ್ತ ಸ್ಥಾನಮಾನ ಸಿಗಲಿಲ್ಲವೆಂದು ಮರಳಿ ಕಾಂಗ್ರೆಸ್ ಮಡಿಲಿಗೆ ಸೇರುವ ವದಂತಿ ಹಬ್ಬಿದೆ.
ಬಿಜೆಪಿ ಸೇರಿಕೊಂಡಿದ್ದ ಎಸ್ ಎಂ ಕೃಷ್ಣ ಪುತ್ರಿ ಶಾಂಭವಿಗೆ ವಿಧಾನಸಭೆ ಚುನಾವಣೆ ಟಿಕೆಟ್ ಕೇಳಿದ್ದರು. ಆದರೆ ಇದಕ್ಕೆ ಬಿಜೆಪಿಯಿಂದ ಸರಿಯಾದ ಸ್ಪಂದನೆ ಸಿಗಲಿಲ್ಲ. ಅಷ್ಟೇ ಅಲ್ಲ, ಬಿಜೆಪಿ ಕೂಡಾ
ಎಸ್ ಎಂ ಕೃಷ್ಣ ಅವರಿಗೆ ಯಾವುದೇ ಹುದ್ದೆ ನೀಡಿಲ್ಲ. ಇದರಿಂದ ಅವರು ಬೇಸತ್ತಿದ್ದಾರೆ ಎನ್ನಲಾಗಿದೆ.
ಈ ಹಿನ್ನಲೆಯಲ್ಲಿ ಮರಳಿ ಕಾಂಗ್ರೆಸ್ ಗೆ ಸೇರಲು ಅವರು ಮನಸ್ಸು ಮಾಡಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಒಪ್ಪಿಗೆ ಮೇರೆಗೆ ಎಸ್ ಎಂ ಕೃಷ್ಣ ಜತೆ ಡಿಕೆ ಶಿವಕುಮಾರ್ ಸೇರಿದಂತೆ ಕೆಲವು ನಾಯಕರು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಎಸ್ ಎಂಕೆ ಮರಳಿ ಕಾಂಗ್ರೆಸ್ ಸೇರಲು ಕಾಂಗ್ರೆಸ್ ನಲ್ಲೂ ಯಾವುದೇ ವಿರೋಧವಿಲ್ಲ. ಹೀಗಾಗಿ ಮರಳಿ ತವರಿಗೆ ಮರಳುವ ನಿರೀಕ್ಷೆಯಲ್ಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.