Publish Date: Thu, 20 Dec 2018 (13:15 IST)
Updated Date: Thu, 20 Dec 2018 (13:17 IST)
ಬೆಳಗಾವಿ : ಸಾಲಮನ್ನಾ ವಿಚಾರದಲ್ಲಿ ಸರ್ಕಾರದ ಬಗ್ಗೆ ಹಗುರವಾಗಿ ಮಾತನಾಡಿದ ಬಿಜೆಪಿ ನಾಯಕರಿಗೆ ಇದೀಗ ಸಿಎಂ ಕುಮಾರಸ್ವಾಮಿ ಸ್ಪಷ್ಟ ಉತ್ತರ ನೀಡಿದ್ದಾರೆ.
ನಾಲ್ಕು ಕಂತುಗಳಲ್ಲಿ ಬ್ಯಾಂಕ್ ಗಳಿಗೆ ಹಣ ತುಂಬುತ್ತೇನೆ. ಇದರ ಬಗ್ಗೆ ನಾನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಇಂದು ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತೇನೆ. ಮುಂದಿನ ಬಜೆಟ್ ನಲ್ಲಿ ರೈತರ ಸಾಲಮನ್ನಾ ಮಾಡುತ್ತೇನೆ. 4 ಕಂತುಗಳಲ್ಲಿ ಮಾಡುತ್ತೇನೆ ಈ ಬಗ್ಗೆ ಎಲ್ಲರೂ ಕಾದು ನೋಡಿ ಎಂದು ಹೇಳಿದ್ದಾರೆ.
ಹಾಗೇ ‘ನಿನ್ನೇ ಹಗುರವಾಗಿ ಮಾತನಾಡಿದ್ದೇನೆ ಅನ್ನೋದು ಬಿಜೆಪಿ ಆರೋಪ. ಸರ್ಕಾರದ ಬಗ್ಗೆ ಹಗುರವಾಗಿ ಮಾತಾಡಿರೋದು ಯಡಿಯೂರಪ್ಪ. ಹಾಗೇ ನೋಡಿದರೆ ನಾವು ಬಿಜೆಪಿ ವಿರುದ್ಧ ಧರಣಿ ಮಾಡಬೇಕು ಎಂದು ಬೆಳಗಾವಿ ಯಡಿಯೂರಪ್ಪ ವಿರುದ್ಧ ಸಿಎಂ ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.