ಸಿಲಿಕಾನ್‌ ವ್ಯಾಲಿ ರೂವಾರಿ ಎಸ್‌.ಎಂ. ಕೃಷ್ಣ ಅವರಿಗೆ ಕರ್ನಾಟಕ ರತ್ನ ನೀಡಲು ಆರ್.ಅಶೋಕ್ ಮನವಿ

Sampriya
ಬುಧವಾರ, 11 ಡಿಸೆಂಬರ್ 2024 (15:52 IST)
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲ ಎಸ್.ಎಂ. ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ   ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಮನವಿ ಮಾಡಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಆರ್.ಅಶೋಕ್, ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು ಕಂಬನಿ ಮಿಡಿಯುತ್ತಿದ್ದಾರೆ.

ಎಸ್‌.ಎಂ.ಕೃಷ್ಣ ಅವರು ಶಾಸಕ, ಸಚಿವ, ಸ್ಪೀಕರ್‌, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಜೊತೆಗೆ, ಜನರ ಬದುಕಿನ ಸುಧಾರಣೆಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅವರು ಅಪಾರವಾಗಿ ಶ್ರಮಿಸಿದ್ದರು. ರಾಜಧಾನಿ ಬೆಂಗಳೂರಿಗೆ ಸಿಲಿಕಾನ್‌ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯ. ವಿದೇಶಾಂಗ ಸಚಿವರಾಗಿ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.

ಎಸ್‌.ಎಂ.ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಕರ್ನಾಟಕ ರತ್ನ (ಮರಣೋತ್ತರ) ನೀಡುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯ. ಈ ಸಲಹೆಯನ್ನು ಪರಿಗಣಿಸಿ ಶ್ರೀಯುತರಿಗೆ ಕರ್ನಾಟಕ ರತ್ನ ನೀಡಿ ಗೌರವ ಸಲ್ಲಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡುತ್ತಿದ್ದೇನೆ ಎಂದಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಧರ್ಮವಲ್ಲ ಬೈಗುಳದ ಶಬ್ಧ, ಬ್ರಾಹ್ಮಣರು ಗುಲಾಮರಾಗಿಸಲು ಹುಟ್ಟುಹಾಕಿದ್ದು: ನಿವೃತ್ತ ಜಡ್ಜ್

ಸಿಎಂ ಮಗ ಎಂಬ ಕಾರಣಕ್ಕೆ ಯತೀಂದ್ರ ವಿರುದ್ಧ ಕ್ರಮ ಇಲ್ವಾ: ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ಏನು

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದ ಯತೀಂದ್ರ ಡಿಕೆ ಶಿವಕುಮಾರ್ ಶಾಕಿಂಗ್ ಕೌಂಟರ್

Karnataka Weather: ಇಂದು ಯಾವ ಜಿಲ್ಲೆಗಳಿಗೆ ಚಳಿ ಹೆಚ್ಚು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments