Webdunia - Bharat's app for daily news and videos

Install App

ಎಸ್‌.ಎಂ. ಕೃಷ್ಣ ಅಂತಿಮ ದರ್ಶನ ಪಡೆದ ರಮ್ಯಾ: ಮಾತನಾಡುವ ಸ್ಥಿತಿಯಲ್ಲಿ ಇಲ್ಲ ಎಂದು ಪ್ರತಿಕ್ರಿಯೆ

Sampriya
ಮಂಗಳವಾರ, 10 ಡಿಸೆಂಬರ್ 2024 (09:06 IST)
Photo Courtesy X
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ಇಂದು ನಸುಕಿನ ಜಾವ ನಿಧನರಾಗಿದ್ದು, ನಟಿ ಮತ್ತು ಮಾಜಿ ಸಂಸದೆ ರಮ್ಯಾ ಅವರು  ಸದಾಶಿವನಗರಕ್ಕೆ ಆಗಮಿಸಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.  

ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ರಮ್ಯಾ ಅವರು ಈಗ ನಾನು ಮಾತನಾಡುವ ಸ್ಥಿತಿಯಲ್ಲಿ ಇಲ್ಲ ಎಂದು ಹೇಳಿ ತೆರಳಿದರು.

ರಮ್ಯಾ ಅವರು ಎಸ್‌.ಎಂ.ಕೃಷ್ಣ ಅವರ ನೇತೃತ್ವದಲ್ಲೇ ರಾಜಕಾರಣಕ್ಕೆ ಕಾಲಿಟ್ಟು, ಕಾಂಗ್ರೆಸ್‌ ಪಕ್ಷದಲ್ಲಿ ಅತ್ಯಂತ ಶೀಘ್ರವಾಗಿ ಬೆಳೆದರು. ತಮ್ಮ ಸೆಲೆಬ್ರಿಟಿ ಇಮೇಜ್‌ನಿಂದಾಗಿ ಹೈಕಮಾಂಡ್‌ನಲ್ಲಿ ಶೀಘ್ರವಾಗಿ ಗುರುತಿಸಿಕೊಂಡಿದ್ದರು.

ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಸೇರಿ ಹೈಕಮಾಂಡ್‌ನ ಪ್ರಭಾವಶಾಲಿ ನಾಯಕರ ಜೊತೆ ನೇರವಾಗಿ ಸಂಪರ್ಕ ಸಾಧಿಸಬಲ್ಲ ರಾಜ್ಯದ ಕೆಲವೇ ಕಾಂಗ್ರೆಸ್ಸಿಗರಲ್ಲಿ ರಮ್ಯಾ ಕೂಡ ಒಬ್ಬರಾಗಿದ್ದರು.

ಕೃಷ್ಣ ಅವರನ್ನು ಅಂಕಲ್‌ ಎಂದೇ ಕರೆಯುತ್ತಿದ್ದ ರಮ್ಯಾ, ಕೃಷ್ಣ ಅವರ ಮಾರ್ಗದರ್ಶನದಲ್ಲೇ ರಾಜಕೀಯ ನಡೆಗಳನ್ನು ಇಟ್ಟವರು. ಮಂಡ್ಯ ಜಿಲ್ಲೆಯ ಕಾಂಗ್ರೆಸ್‌ನ ಒಳ ರಾಜಕಾರಣವನ್ನು ಭೇದಿಸಿ ಸಂಸದರಾಗಲು ಈ ಮಾರ್ಗದರ್ಶನವೇ ಅವರಿಗೆ ರಕ್ಷೆಯಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಗೆ ಆಜಾನ್ ಕೂಗುವ ಮೈಕ್ ಮುಟ್ಟುವ ತಾಕತ್ತಿಲ್ಲ: ಬಿಜೆಪಿ ಟೀಕೆ

ಡಿಕೆ ಶಿವಕುಮಾರ್ ಚರ್ಚ್ ಗೆ ಹೋಗ್ತಾರೆ ಆದ್ರೆ ಅದು ನಮ್ದು ಅನ್ನಕ್ಕಾಗುತ್ತಾ: ವಿ ಸೋಮಣ್ಣ

ಶಾಸಕಿಯಾಗುವ ಹುಚ್ಚು ಹಿಡಿದ್ರೆ ಬಿಡಿಸಲಾಗದು, ಕುಸುಮಾಗೆ ಟಾಂಕ್‌ ಕೊಟ್ರಾ ಮುನಿರತ್ನ

ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಪರಿಸ್ಥಿತಿ ಏನಾಗಿದೆ ಗೊತ್ತಾ

ದಾವಣಗೆರೆ: ಗಣೇಶಮೂರ್ತಿ ಬಳಿ ವಿವಾದ ಸೃಷ್ಟಿಸಿದ ಫ್ಲೆಕ್ಸ್‌ನಲ್ಲಿ ಏನಿತ್ತು

ಮುಂದಿನ ಸುದ್ದಿ
Show comments