Publish Date: Mon, 18 Dec 2023 (18:00 IST)
Updated Date: Mon, 18 Dec 2023 (18:18 IST)
ಕನ್ನಡದ ಹೆಸರಾಂತ ನಟ ವಿಷ್ಣುವರ್ಧನ್ ಅವರ ಪುಣ್ಯಭೂಮಿ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆ ಕಿಚ್ಚ ಸುದೀಪ್ ಮಾತನಾಡಿದ್ದಾರೆ.
ಡಿಕೆಶಿಯನ್ನು ಭೇಟಿ ಮಾಡಿದ್ದ ಸುದೀಪ್, ಅಭಿಮಾನ ಸ್ಟುಡಿಯೋದಲ್ಲಿರುವ ವಿಷ್ಣು ಪುಣ್ಯ ಭೂಮಿಯನ್ನು ಅಭಿಮಾನಿಗಳ ಕೋರಿಕೆಯ ಮೇರೆಗೆ ಹಾಗೆಯೇ ಉಳಿಸಿಕೊಳ್ಳಬೇಕು ಮತ್ತು ಹತ್ತು ಗುಂಟೆ ಜಮೀನನ್ನು ನೀಡಲು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.