ನಡುರಸ್ತೆಯಲ್ಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ!

Webdunia
ಶುಕ್ರವಾರ, 24 ಜೂನ್ 2022 (15:03 IST)
ತುಮಕೂರು :  ಇಂದು ತುಮಕೂರಿನಲ್ಲಿ ಬೆಳಗ್ಗೆ ವ್ಯಕ್ತಿಯೋರ್ವನ ಕೊಲೆಗೆ ಯತ್ನ ನಡೆದಿದೆ.
 
ಹೌದು, ನಗರದ ಹೊರವಲಯ ಭೀಮಸಂದ್ರದಲ್ಲಿ ಘಟನೆ ನಡೆದಿದೆ. 40 ವರ್ಷದ ರಂಗರಾಜು ಎಂಬುವರ ಮೇಲೆ ಮನಸೋ ಇಚ್ಛೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ.

ಇದ್ರಿಂದಾಗಿ ರಂಗರಾಜುಗೆ ಗಂಭೀರವಾಗಿ ಗಾಯಗೊಂಡಿದೆ. ಹಲ್ಲೆ ನಡೆಸಿರುವ ವ್ಯಕ್ತಿ ಕಿರಣ್ ಎಂದು ತಿಳಿದುಬಂದಿದೆ.

ವೈಯಕ್ತಿಕ ದ್ವೇಷದಿಂದಾಗಿ ಈ ಹಿಂದೆ ಕಿರಣ್ ತಂದೆ ಮೇಲೆ ರಂಗರಾಜು ಮಾರಣಾಂತಿಕ ಹಲ್ಲೆ ನಡೆಸಿದ್ದ, ಇದ್ರಿಂದ ಕುಪಿತಗೊಂಡಿದ್ದ ಕಿರಣ್ , ರಂಗರಾಜುನನ್ನು ಕೊಲೆ ಮಾಡುವುದಕ್ಕೆ ಸಂಚು ರೂಪಿಸಿಕೊಂಡಿದ್ದ, ಹೀಗಾಗಿ ಇಂದು ಬೆಳಗ್ಗೆ ನಡು ರಸ್ತೆಯಲ್ಲಿ ಹಲ್ಲೆ ಮಚ್ಚಿನಿಂದ ಕೊಚ್ಚಿದ್ದಾನೆ.

ನಡು ರಸ್ತೆಯಲ್ಲಿ ನಡೆದ ಈ ಹಲ್ಲೆಯನ್ನು ಕಂಡ ಜನರು ಒಂದು ಕ್ಷಣ ಗಾಬರಿಗೊಂಡಿದ್ದರು. ಇಂದು ಬೆಳಗ್ಗೆ ಕಿರಣ್ ಜೊತೆ ಜಗಳಕ್ಕೆ ಇಳಿದಿದ್ದ ರಂಗರಾಜು ಈ ವೇಳೆ ನಿನ್ನನ್ನು ಹೆಚ್ಚು ದಿನ ಬದುಕಲು ಬಿಡುವುದಿಲ್ಲ ನಿನ್ನ ತಂದೆಗೆ ಆದ ಗತಿಯೇ ನಿನಗೆ ಆಗುತ್ತದೆ ಎಂದು ಕಿರಣ್ ಗೆ ಅವಾಜ್ ಹಾಕಿದ್ದ ,

ಈ ವೇಳೆ ಮೊದಲೇ ತನ್ನ ಬಳಿ ಇಟ್ಟುಕೊಂಡಿದ್ದ ಮಚ್ಚಿನಿಂದ ಹಲ್ಲೆ ಮಾಡಿರುವ ಕಿರಣ್, ರಂಗರಾಜು ಸಾವನ್ನಪ್ಪಿದ್ದಾನೆ ಎಂದು ತಿಳಿದುಕೊಂಡು ಸ್ಥಳದಿಂದ ತೆರಳಿದ್ದಾನೆ. ಇನ್ನೂ ತೀವ್ರವಾಗಿ ಗಾಯಗೊಂಡಿರುವ ರಂಗರಾಜುನನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನೆ ಮಾಡಲಾಗಿದೆ. ಆತನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments