Publish Date: Sat, 21 Feb 2026 (19:06 IST)
Updated Date: Sat, 21 Feb 2026 (19:11 IST)
ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಲಂಚ ಆರೋಪ ಹೊರಿಸಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಇದೀಗ ಸಿಸಿಬಿಗೆ ಉಲ್ಟಾ ಹೊಡೆದಿದ್ದಾರೆ.
ಸಿಸಿಬಿ ವಿಚಾರಣೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ ಅವರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ತಪ್ಪು ಮಾಹಿತಿ ನೀಡಿದ್ದಕ್ಕಾಗಿ ಬಹಿರಂಗವಾಗಿ ಕ್ಷಮೆ ಕೋರುತ್ತೇನೆ ಎನ್ನುವ ಮೂಲಕ ಉಲ್ಟಾ ಹೊಡೆದಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣದ ವಿರುದ್ಧ ಕಾನೂನು ಹೋರಾಟ ನಡೆಸುತ್ತಿರುವ ಸ್ನೇಹಮಯಿ ಕೃಷ್ಣ ಅವರು, ಮುಡಾ ಮಾಜಿ ಆಯುಕ್ತ ಡಿಬಿ ನಟೇಶ್ ಅವರು ಶಾಲಿನಿ ರಜನೀಶ್ ಅವರಿಗೆ ಲಂಚ ಕೊಟ್ಟು ಮುಂಬಡ್ತಿ ಪಡೆದಿದ್ದಾರೆಂದು ಗಂಭೀರ ಆರೋಪ ಮಾಡಿದ್ದರು.
ಸುಮಾರು 23 ಗಂಟೆಗೂ ಹೆಚ್ಚು ಕಾಲ ಸಿಸಿಬಿ ವಿಚಾರಣೆಗೆ ಒಳಗಾಗಿದ್ದ ಬಳಿಕ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಈಗ ಉಲ್ಟಾ ಹೊಡೆದಿದ್ದಾರೆ.
ವಿಚಾರಣೆ ಬಳಿಕ ತಪ್ಪೊಪ್ಪಿಕೊಂಡಿರೋ ಸ್ನೇಹಮಯಿ ಕೃಷ್ಣ, ಆಡಿಯೋ ನಿಜ, ಆದರೆ ಶಾಲಿನಿ ರಜನೀಶ್ ವಿರುದ್ಧದ ಆರೋಪ ಸುಳ್ಳು ಅಂದಿದ್ದಾರೆ. ಮುಡಾ ಪ್ರಕರಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆಯನ್ನು ಕೊಟ್ಟಿದ್ದಾರೆ.