Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಪಕ್ಷ ತೊರೆದಿರುವುದಕ್ಕೆ ಹಲವು ಕಾರಣಗಳಿವೆ: ಎಚ್.ವಿಶ್ವನಾಥ್

ಕಾಂಗ್ರೆಸ್ ಪಕ್ಷ ತೊರೆದಿರುವುದಕ್ಕೆ ಹಲವು ಕಾರಣಗಳಿವೆ: ಎಚ್.ವಿಶ್ವನಾಥ್
ಚಿತ್ರದುರ್ಗ , ಶುಕ್ರವಾರ, 28 ಜುಲೈ 2017 (12:37 IST)
ಕಾಂಗ್ರೆಸ್ ಪಕ್ಷ ತೊರೆದಿರುವುದಕ್ಕೆ ಹಲವು ಕಾರಣಗಳಿವೆ ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ಹೇಳಿದ್ದಾರೆ.
 
ಕಾಂಗ್ರೆಸ್ ಮತ್ತು ಬಿಜೆಪಿಯ ಅಡಳಿತವನ್ನು ತುಂಬಾ ಹತ್ತಿರದಿಂದ ನೋಡಿದ್ದೇನೆ. ಜೆಡಿಎಸ್ ಕ್ರಾಂತಿಕಾರಿ ನಿರ್ಣಯ ಕೈಗೊಂಡಿದೆ. ಜೆಡಿಎಸ್ ಪಕ್ಷ ರೈತರ, ಬಡವ, ದೀನ ದಲಿತರ ಪರವಾಗಿದೆ ಎಂದು ತಿಳಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ, ಸಚಿವ ಮಹಾದೇವಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮಹಾದೇವಪ್ಪ ಪುತ್ರರು ಮರಳು ಧಂಧೆ ಮಾಡುತ್ತಿರುವುದು ನಿಜ ಎಂದರು. 
 
ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದು ಖಚಿತ. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ಗುಡುಗಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯಸಭೆ ಚುನಾವಣೆ: ಅಮಿತ್ ಶಾ ನಾಮಪತ್ರ ಸಲ್ಲಿಕೆ