Select Your Language

Notifications

webdunia
webdunia
webdunia
Wednesday, 9 April 2025
webdunia

ಗಗನಕ್ಕೇರಿದ ಬೆಳ್ಳುಳ್ಳಿ ಬೆಲೆ

garlic prices
bangalore , ಮಂಗಳವಾರ, 12 ಡಿಸೆಂಬರ್ 2023 (17:08 IST)
ಈರುಳ್ಳಿ ಆಯ್ತು ಈಗ ಬೆಳ್ಳುಳ್ಳಿ ಸರದಿ. ಗಗನಕ್ಕೇರಿರುವ ಬೆಳ್ಳುಳ್ಳಿ ಬೆಲೆ ಸಾಮಾನ್ಯ ಗ್ರಾಹಕನ ಜೇಬು ಸುಡುತ್ತಿದೆ. ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಕೆಜಿಗೆ 300-400ರೂ. ತಲುಪಿದೆ. ಹವಾಮಾನ ವೈಪರೀತ್ಯದಿಂದಾಗಿ ಬೆಳ್ಳುಳ್ಳಿ ಇಳುವರಿ ಕಡಿಮೆಯಾದ ಕಾರಣ, ಮಹಾರಾಷ್ಟ್ರದಿಂದ ಪೂರೈಕೆ ತಗ್ಗಿದೆ.

ನಾಸಿಕ್ ಹಾಗೂ ಪುಣೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ಆದರೆ, ಈ ಬಾರಿ ಹವಾಮಾನ ವೈಪರೀತ್ಯದಿಂದಾಗಿ ಬೆಳೆ ಚೆನ್ನಾಗಿ ಬಂದಿಲ್ಲ. ಹೀಗಾಗಿ ಮುಂಬೈನಲ್ಲಿರುವ ಬೆಳ್ಳುಳ್ಳಿ ಸಗಟು ವ್ಯಾಪಾರಿಗಳು ನೆರೆಯ ರಾಜ್ಯಗಳಾದ ಗುಜರಾತ್, ಮಧ್ಯಪ್ರದೇಶ ಹಾಗೂ ರಾಜಸ್ಥಾನದಿಂದ ಬೆಳ್ಳುಳ್ಳಿ ಖರೀದಿಸುತ್ತಿದ್ದಾರೆ. ಇದರಿಂದ ಸಾಗಣೆ ವೆಚ್ಚ ಹಾಗೂ ಸ್ಥಳೀಯ ತೆರಿಗೆಗಳ ಕಾರಣಕ್ಕೆ ಬೆಳ್ಳುಳ್ಳಿ ಬೆಲೆಯಲ್ಲಿ ಏರಿಕೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾಯಂಡಹಳ್ಳಿ ಸರ್ಕಲ್ ಗೆ ಲೀಲಾವತಿ ಹೆಸರು ?