Select Your Language

Notifications

webdunia
webdunia
webdunia
webdunia

ಸಾಮಾಜಿಕ ಜಾಲತಾಣ ದುರ್ಬಳಕೆ : ಎಸ್‌ ಪಿ ಖಡಕ್ ವಾರ್ನಿಂಗ್

ಸಾಮಾಜಿಕ ಜಾಲತಾಣ ದುರ್ಬಳಕೆ : ಎಸ್‌ ಪಿ ಖಡಕ್ ವಾರ್ನಿಂಗ್
ಉತ್ತರ ಕನ್ನಡ , ಬುಧವಾರ, 8 ಏಪ್ರಿಲ್ 2020 (19:45 IST)
ವಾಟ್ಸಾಪ್, ಫೇಸ್‌ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವವರಿಗೆ ಎಸ್ ಪಿ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡುವವರ ಮೇಲೆ ನಿದ್ಯಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಹೇಳಿದ್ದಾರೆ.  

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿದ್ದಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲೆಯಲ್ಲಿ ಏಳು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.  ಒಂದು ಸಮುದಾಯವನ್ನು ಗುರಿಯಾಗಿರಿಸಿಕೊಂಡು ಸಂದೇಶ ರವಾನಿಸಿದರೆ ಅಂತವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ನಿಂತಿದೆ ಎಂದು ಕೆಲವು ಸಾರ್ವಜನಿಕರು ಮನೆಯಿಂದ ಹೊರಬಂದು ಅನಗತ್ಯ ಓಡಾಟ ಆರಂಭಿಸಿದ್ದಾರೆ. ಇಂಥ ಉದಾಸೀನತೆ ಬೇಡ ಎಂದಿದ್ದಾರೆ.  ಜಿಲ್ಲೆಗೆ ಹೊರರಾಜ್ಯದಿಂದ ಸುಮಾರು 44 ತಬ್ಲಿಘಿ ಜಮಾತೆಯವರು ಬಂದಿದ್ದಾರೆ ಎಂದರು.



Share this Story:

Follow Webdunia kannada

ಮುಂದಿನ ಸುದ್ದಿ

ಲಾಕ್ ಡೌನ್ ನಲ್ಲಿ ಎಪಿಎಂಸಿಗೆ ಬಂದ ಸಚಿವ