Select Your Language

Notifications

webdunia
webdunia
webdunia
webdunia

ಅಯೋಧ್ಯೆ ರಾಮಮಂದಿರದಲ್ಲಿ ಸಾಮಾಜಿಕ ಸೇವೆಯೇ ಹರಕೆ!

ಅಯೋಧ್ಯೆ ರಾಮಮಂದಿರದಲ್ಲಿ ಸಾಮಾಜಿಕ ಸೇವೆಯೇ ಹರಕೆ!
bangalore , ಶುಕ್ರವಾರ, 17 ನವೆಂಬರ್ 2023 (19:25 IST)
ಕೋಟ್ಯಂತರ ಭಕ್ತರ ಆಶಯದಂತೆ ನಿರ್ಮಾಣ ಗೊಳ್ಳುತ್ತಿರುವ ಅಯೋಧ್ಯೆ ರಾಮ ಮಂದಿರ ದಲ್ಲಿ ಶ್ರೀರಾಮನಿಗೆ ಪ್ರತ್ಯೇಕ ಹರಕೆ ಸೇವೆ ಎಂಬುದು ಇರುವುದಿಲ್ಲ. ಬದಲಾಗಿ ಪ್ರತಿ ಯೊಬ್ಬ ಭಕ್ತರು ಮಾಡಿದ ಸಮಾಜ ಸೇವೆಯನ್ನು ರಾಮನ ಸಾನ್ನಿಧ್ಯದಲ್ಲಿ ನಿವೇದಿಸಿಕೊಳ್ಳುವ ರಾಮಾರ್ಪಣೆಯೇ ಸೇವೆ ಎಂದು ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸದಸ್ಯರೂ ಆಗಿರುವ ಅವರು ಉಡುಪಿ ಮತ್ತು ಮಂಗಳೂರಿನಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿ, ರಾಮ ಮಂದಿರದ ಮೂಲಕ ದೇಶದಲ್ಲಿ ರಾಮರಾಜ್ಯ ನಿರ್ಮಾಣದ ಕನಸು ಎಲ್ಲರದ್ದು. ಇದು ನನಸಾಗಬೇಕಾದರೆ ಪ್ರತಿ ಭಕ್ತರು ಮಾಡಿದ ಸಮಾಜ ಸೇವೆ ಯನ್ನು ಶ್ರೀರಾಮನ ಸಾನ್ನಿಧ್ಯದಲ್ಲಿ ನಿವೇದಿಸಿಕೊ ಳ್ಳುವ ರಾಮಾರ್ಪ ಣೆಯೇ ಸೇವೆ ಆಗಿರುತ್ತದೆ. ಭಕ್ತರಿಗಾಗಿ ಆರತಿ, ತೀರ್ಥ ಹಾಗೂ ಉತ್ತರ ಭಾರತದ ಸಿಹಿಯ ನೈವೇದ್ಯ ಇರುತ್ತದೆ. ಇದು ಬಿಟ್ಟರೆ ಹರಕೆ, ಸೇವೆ ಇಲ್ಲ ಎಂದರು

Share this Story:

Follow Webdunia kannada

ಮುಂದಿನ ಸುದ್ದಿ

ತಾಂತ್ರಿಕ ದೋಷ; UCO ಬ್ಯಾಂಕ್ ಖಾತೆದಾರರಿಗೆ 820 ಕೋಟಿ ಜಮೆ!