Select Your Language

Notifications

webdunia
webdunia
webdunia
webdunia

ಜಿಲ್ಲಾ ಪಂಚಾಯತ್ ಚುನಾವಣಾ ಕಣದಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ ಯುವತಿ

ಜಿಲ್ಲಾ ಪಂಚಾಯತ್ ಚುನಾವಣಾ ಕಣದಲ್ಲಿ  ಸಾಫ್ಟ್‌ವೇರ್‌ ಎಂಜಿನಿಯರ್‌ ಯುವತಿ
ಯಾದಗಿರಿ , ಮಂಗಳವಾರ, 9 ಫೆಬ್ರವರಿ 2016 (12:52 IST)
ಜಿಲ್ಲಾಪಂಚಾಯತ್, ತಾಲ್ಲೂಕಾ ಪಂಚಾಯತ್ ಚುನಾವಣಾ ಕಾವು ರಂಗೇರುತ್ತಿದ್ದು ಯಾದಗಿರಿಯ ಪುಟಪಾಕ್ ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಸಾಫ್ಟ್‌ವೇರ್‌ ಎಂಜಿನಿಯರ್‌ ಒಬ್ಬರು ಕಣಕ್ಕಿಳಿದು ಆಶ್ಚರ್ಯ ಮೂಡಿಸಿದ್ದಾರೆ. ದೀಪಿಕಾರಾಣಿ ಚುಕ್ಕಪ್ಪ ನಾಯಕ ಎಂಬುವವರು ಸಾಮಾನ್ಯ ಮಹಿಳೆಗೆ ಮೀಸಲಾಗಿರುವ ಚಪೇಟ್ಲಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ನಿನ್ನೆ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಅವರು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಿರುವವರಲ್ಲಿ ಅತ್ಯಂತ ಕಿರಿಯ ಅಭ್ಯರ್ಥಿ ಎಂಬ ಹೆಗ್ಗಳಿಕೆಯೂ ಇವರದು.
 
ಬಿಇ ಪದವಿಯನ್ನು ಪೂರೈಸಿರುವ 22 ವರ್ಷ ವಯಸ್ಸಿನ ದೀಪಿಕಾರಾಣಿ,  ಹೈದರಾಬಾದ್‌ನಲ್ಲಿರುವ ಖಾಸಗಿ ಕಂಪೆನಿಯೊಂದರಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದರು.
 
ತಂದೆ ಹಾಗೂ ಪಕ್ಷದ ನಾಯಕರು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ನೀಡಿದ್ದ ಸಲಹೆಯನ್ನು ಸ್ವೀಕರಿಸಿ ಕೆಲಸಕ್ಕೆ ರಾಜೀನಾಮೆ ನೀಡಿ ಚುನಾವಣಾ ಕಣಕ್ಕಿಳಿದಿದ್ದಾರೆ. 

Share this Story:

Follow Webdunia kannada