Select Your Language

Notifications

webdunia
webdunia
webdunia
webdunia

ಸಾಲಭಾದೆ: ಮೃತ ರೈತ ಕುಟುಂಬಕ್ಕೆ ಪರಿಹಾರ ನೀಡಲು ಒತ್ತಾಯ

ಸಾಲಭಾದೆ: ಮೃತ ರೈತ ಕುಟುಂಬಕ್ಕೆ ಪರಿಹಾರ ನೀಡಲು ಒತ್ತಾಯ
ಮಂಡ್ಯ , ಬುಧವಾರ, 26 ಸೆಪ್ಟಂಬರ್ 2018 (14:09 IST)
ಸಾಲಭಾದೆಯಿಂದ ಜೀವನದಲ್ಲಿ ಜಿಗುಪ್ಸೆ ಹೊಂದಿ ಕುಟುಂಬ ಸಮೇತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಕುಟುಂಬಕ್ಕೆ ಸರಕಾರ ಪರಿಹಾರ ನೀಡಬೇಕೆಂಬ ಆಗ್ರಹ ಕೇಳಿಬರುತ್ತಿದೆ.

ಸಾಲಭಾದೆಯಿಂದ ಜೀವನದಲ್ಲಿ ಜಿಗುಪ್ಸೆ ಹೊಂದಿ ಕುಟುಂಬ ಸಮೇತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸುಂಕಾತೊಣ್ಣೂರು ಗ್ರಾಮದ ಮೃತ ರೈತ ನಂದೀಶ್ ಅವರ ಕುಟುಂಬ ವರ್ಗಕ್ಕೆ ರಾಜ್ಯ ಸರ್ಕಾರ ತಲಾ 10 ಲಕ್ಷರೂ ಪರಿಹಾರ ನೀಡಬೇಕು. ಸರ್ಕಾರ ತಲಾ 10 ಲಕ್ಷ ರೂ. ಪರಿಹಾರ ನೀಡಬೇಕು ಎಂದು ರೈತ ಸಂಘದ ನಾಯಕಿ ಸುನೀತಾ ಪುಟ್ಟಣ್ಣಯ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

 ಪಾಂಡವಪುರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುನೀತಾ ಪುಟ್ಟಣ್ಣಯ್ಯ, ರೈತರ ಆತ್ಮಹತ್ಯೆ ಆಗದಂತೆ ಸರ್ಕಾರ ಹೆಚ್ಚು ಗಮನ ಸೆಳೆಯಬೇಕಾಗಿದೆ. ಯಶಸ್ವಿನಿ ಯೋಜನೆ ಸ್ಥಗಿತಗೊಳಿಸಿರುವುದು ಸರಿಯಲ್ಲ, ಹಿಂದಿನಂತೆ ಯಶಸ್ವಿನಿ ಯೋಜನೆಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಎಸ್ ಸಿ/ಎಸ್ಟಿ ನೌಕರರಿಗೆ ಬಿಗ್ ಶಾಕ್ ನೀಡಿದ ಸುಪ್ರೀಂಕೋರ್ಟ್