ಚುನಾವಣಾ ರಾಜಕಾರಣಕ್ಕೆ ಸೋಮಣ್ಣ ನಿವೃತ್ತಿ: ದೇವರೇ ಹೇಳಿದರೂ ಸ್ಪರ್ಧಿಸಲ್ಲ ಎಂದು ಕೇಂದ್ರ ಸಚಿವ

Sampriya
ಭಾನುವಾರ, 24 ಆಗಸ್ಟ್ 2025 (10:39 IST)
Photo Credit X
ತುಮಕೂರು: ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರು ಚುನಾವಣಾ ರಾಜಕಾರಣದ ನಿವೃತ್ತಿ ಹೇಳುವುದಾಗಿ ತಿಳಿಸಿದ್ದಾರೆ. ಸ್ವತಃ ದೇವರೇ ಹೇಳಿದ್ರೂ ನಾನು ಮತ್ತೆ ಚುನಾವಣೆಗೆ ನಿಲ್ಲಲ್ಲ ಎಂದು ಹೇಳಿದ್ದಾರೆ.

 ವಿ.ಸೋಮಣ್ಣ ಅವರು ತುಮಕೂರು ಜಿಲ್ಲಾಭಿವೃದ್ಧಿ ವಿಚಾರದ ಕುರಿತು ಮಾತನಾಡುವ ಸಂದರ್ಭದಲ್ಲಿ ಮತ್ತೆ ಚುನಾವಣೆಗೆ ನಿಂತುಕೂ ಅಂತ ದೇವರು ಬಂದು ಹೇಳಿದರು ನಾನು ಕೇಳುವನಲ್ಲ ಎಂದು ಹೇಳುವ ಮೂಲಕ ಮತ್ತೆ ಚುನಾವಣೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. 

ಕೇಂದ್ರ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಹಾಗೂ ತುಮಕೂರು ಜಿಲ್ಲಾಭಿವೃದ್ಧಿ ವಿಚಾರದ ಬಗ್ಗೆ ಮಾತನಾಡಿ, ತುಮಕೂರು-ಬೆಂಗಳೂರು ನಾಲ್ಕು ಪಥದ ರೈಲ್ವೆ. ಸರ್ವೆ ಆಯ್ತು ಡಿಪಿಆರ್ ಶುರು ಮಾಡಿಸಿದ್ದೀನಿ. ಇದರ ಜೊತೆಗೆ ಎನ್‌ಹೆಚ್4ರ ತಿಮ್ಮರಾಜನಹಳ್ಳಿ ಅಭಿವೃದ್ಧಿ ಆಗುತ್ತದೆ. ಕೆಐಡಿಬಿಯವರ ಜೊತೆ ಮಾತನಾಡಿದ್ದೇನೆ ಎಂದರು.

ಇನ್ನೊಂದು ಐವತ್ತು ವರ್ಷಕ್ಕೆ ತೊಂದರೆ ಆಗಬಾರದು. ನಾನು ಇನ್ನು ಐವತ್ತು ವರ್ಷ ಇರ್ತೀನೇನಪ್ಪಾ ಎಂದು ಸುದ್ದಿಗೋಷ್ಠಿ ಮಧ್ಯೆಯೇ ತಮಾಷೆ ಮಾಡಿದರು. ಇಂತಹ ಅಭಿವೃದ್ಧಿ ಕೆಲಸಗಳೆಲ್ಲಾ ನಮ್ಮ ರಾಜಕೀಯ ಜೀವನದಲ್ಲಿ ಹೆಜ್ಜೆ ಗುರುತು ಎಂದು ತಿಳಿಸಿದರು.

ಸಿದ್ದಗಂಗಾ ಮಠದ ಶಿವಕುಮಾರ ಮಹಾಸ್ವಾಮೀಜಿಗಳವರ ಹೆಸರನ್ನು ತುಮಕೂರು ವಿಶ್ವವಿದ್ಯಾಲಯಕ್ಕೆ ನಾಮಕರಣ ಮಾಡುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯನವರು, ರಾಜ್ಯದ ಗೃಹ ಮಂತ್ರಿಗಳು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ್ ಅವರಿಗೆ ಪತ್ರ ಬರೆದು ವಿನಂತಿಸಿಕೊಂಡಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments