Select Your Language

Notifications

webdunia
webdunia
webdunia
webdunia

ಸೋಮಶೇಖರ್​​ ಗೃಹಲಕ್ಷ್ಮಿ ಪೂರ್ವಭಾವಿ ಸಭೆ

ರಾಜ್ಯ ಸರ್ಕಾರ
bangalore , ಸೋಮವಾರ, 28 ಆಗಸ್ಟ್ 2023 (16:50 IST)
ರಾಜ್ಯ ಸರ್ಕಾರದ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್​​​ 30ರಂದು ಚಾಲನೆ ಹಿನ್ನೆಲೆ ಹೇರೋಹಳ್ಳಿ ಶಾಸಕರ ಕಚೇರಿಯಲ್ಲಿ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಪೂರ್ವಭಾವಿ ಸಭೆ ನಡೆಸಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದ 17 ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾಜಿ ಅಧ್ಯಕ್ಷರು, ಮಾಜಿ ಉಪಾಧ್ಯಕ್ಷರು ಹಾಗೂ ತಾಲ್ಲೂಕು ಪಂಚಾಯತಿ ಸದಸ್ಯರು ಹಾಗೂ ಮುಖಂಡರ ಜೊತೆ ಸಭೆ ನಡೆಸಿದ್ದಾರೆ. ಹೇರೋಹಳ್ಳಿ ಶಾಸಕರ ಕಚೇರಿಯಲ್ಲಿ ಸೋಮಶೇಖರ್ ನೇತೃತ್ವದಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ಮಾತನಾಡಿದ ಸೋಮಶೇಖರ್, ಸಭೆಯಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆಸೋದಿಲ್ಲ. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮಾತ್ರ ಈ ಸಭೆ ಎಂದು ಸ್ಪಷ್ಟಪಡಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯಿಂದ 10-30 ಜನ ಬರಬಹುದು