Publish Date: Sat, 21 Jan 2017 (17:52 IST)
Updated Date: Sat, 21 Jan 2017 (18:00 IST)
ಬಿಜೆಪಿ ಒಡೆದ ಮನೆಯಂತಾಗಿದ್ದು. ಆ ಪಕ್ಷದ ಹಲವು ಮುಖಂಡರು ನಮ್ಮ ಸಂಪರ್ಕದಲ್ಲಿದ್ದಾರೆ. ಸದ್ಯದಲ್ಲಿಯೇ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಬಾಂಬ್ ಸಿಡಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧವೇ ಸ್ಪರ್ಧಿಸಿದ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷಕ್ಕೆ ವಾಪಸ್ ಕರೆತಂದಾಗಲೇ ಬಿಜೆಪಿ ಪಕ್ಷ ಒಡೆದು ಹೋಗಿದೆ. ಅಧಿಕಾರ ಇಲ್ಲದೆ ಈ ರೀತಿ ಕಚ್ಚಾಡುವವರು, ಅಧಿಕಾರ ಬಂದ ಮೇಲೆ ಹೇಗೆ ಎಂದು ವ್ಯಂಗ್ಯವಾಡಿದರು.
ಮಾಜಿ ಸಚಿವ ವಿ.ಸೋಮಣ್ಣ ಕಾಂಗ್ರೆಸ್ ಸೇರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ, ಬಿಜೆಪಿ ಪಕ್ಷದ ಹಲವು ಅತೃಪ್ತ ನಾಯಕರು ಕಾಂಗ್ರೆಸ್ ಬಾಗಿಲು ಬಡೆಯುತ್ತಿದ್ದಾರೆ. ಹಲವರು ನಮ್ಮ ಜೊತೆ ಮಾತುಕತೆಯೂ ನಡೆಸಿದ್ದಾರೆ. ಅವರು ಯಾರು ಅಂತ ಬಹಿರಂಗ ಮಾಡಲ್ಲ ಎಂದರು.
ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪಚುನಾವಣೆಗೆ ಕಾಂಗ್ರೆಸ್ ಬಳಿ ಅಭ್ಯರ್ಥಿಗಳ ಕೊರತೆ ಇಲ್ಲ. ಚುನಾವಣೆ ದಿನಾಂಕ ಘೋಷಣೆ ಬಳಿಕ ಅಭ್ಯರ್ಥಿ ಹೆಸರು ಪ್ರಕಟಿಸುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ