ಹಾಸಿಗೆಗಾಗಿ ದರ್ಶನ್‌ ಕೋರ್ಟ್‌ಗೆ ಹೋಗುವಾಗ ಕೆಲ ಕೈದಿಗಳಿಗೆ ರಾಜಾತಿಥ್ಯ: ಕೆರಳಿ ಕೆಂಡವಾದ ಪರಮೇಶ್ವರ್‌

Sampriya
ಭಾನುವಾರ, 9 ನವೆಂಬರ್ 2025 (13:42 IST)
ಬೆಂಗಳೂರು: ಜೈಲಿನಲ್ಲಿ ಕೆಲ ಜೈದಿಗಳಿಗೆ ರಾಜಾತಿಥ್ಯ ದೊರಕುತ್ತಿರುವ ಬಗ್ಗೆ ಕೆಂಡಾಮಂಡಲವಾದ ಗೃಹ ಸಚಿವ ಪರಮೇಶ್ವರ್‌ ಅವರು ಈ ಬಗ್ಗೆ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದಾರೆ.  

ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರು ದಿಂಬು, ಹಾಸಿಗೆಗೆ ಕೋರ್ಟ್‌ನಲ್ಲಿ ಮನವಿ ಮಾಡುತ್ತಾರೆ. ಆದರೆ ಕೆಲ ಕೈದಿಗಳಿಗೆ ಎಲ್ಲವೂ ಸುಲಭವಾಗಿ ಸಿಗುತ್ತದೆ ಎಂದು ಜೈಲಿನ ಅವ್ಯವಸ್ಥೆ ವಿರುದ್ಧ ಕಿಡಿಕಾರಿದ್ದಾರೆ.

ಜೈಲಿನಲ್ಲಿ ಪದೇಪದೇ ಹೀಗಾಗುತ್ತದೆ ಎಂದು ಹಿಂದೆಯೂ ಕ್ರಮ ತೆಗೆದುಕೊಂಡಿದ್ದೆವು. ಕಾರಾಗೃಹ ವಿಭಾಗದ ಡಿಜಿಪಿ ದಯಾನಂದ್ ಅವರ ಜತೆ ಚರ್ಚಿಸಿದ್ದೇನೆ. ಪದೇ ಇದೇ ಇದು ನಡೆಯುತ್ತಿದೆ. ಯಾರು ಉಸ್ತುವಾರಿ ಇದ್ದಾರೆ ಅವರ ವಿರುದ್ಧ ಕ್ರಮ ಆಗಲೇಬೇಕು. ಇದನ್ನೆಲ್ಲ ಸಹಿಸಲು ಸಾಧ್ಯವಿಲ್ಲ ಎಂದು ತೀಷ್ಣವಾಗಿ ಪ್ರತಿಕ್ರಿಯಿಸಿದರು.

ರಾಜಾತಿಥ್ಯ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ್ದು ದಯಾನಂದ್ ಅವರಿಂದ ವರದಿ ಕೇಳಿದ್ದೇನೆ. ನಾನೇ ಅಧಿಕಾರಿಗಳ ಸಭೆ ಕರೆಯುತ್ತೇನೆ. ದಯಾನಂದ್ ಅವರು ವರದಿ ಕೊಟ್ಟಮೇಲೆ ಪರಿಶೀಲನೆ ನಡೆಸುತ್ತೇವೆ. ವರದಿ ನಮಗೆ ಸಮಾಧಾನ ಆಗದೇ ಇದ್ದರೆ ಉನ್ನತ ಮಟ್ಟದ ತನಿಖೆ ಮಾಡುತ್ತೇವೆ. ತನಿಖೆಗೆ ಸಮಿತಿ ರಚನೆ ಮಾಡುತ್ತೇವೆ ಎಂದು ತಿಳಿಸಿದರು.

ನಿನ್ನೆಯಷ್ಟೇ ಉಮೇಶ್ ರೆಡ್ಡಿ, ತರುಣ್ ಕೊಂಡೂರು ಹಾಗೂ ಶಂಕಿತ ಉಗ್ರ ಶಕೀಲ್ ಜೈಲಿನಲ್ಲಿ ಮೊಬೈಲ್ ಹಿಡಿದಿದ್ದ ಫೋಟೋಸ್​ ವೈರಲ್ ಆಗಿತ್ತು. ಇದೀಗ ಮತ್ತಷ್ಟು ವಿಡಿಯೋ ಹೊರಬಿದ್ದಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments