ಊಟ ಬೇಕೆಂದು ಅತ್ತಿದ್ದಕ್ಕೆ ಮಗನ ಮೇಲೆ ಹಲ್ಲೆ ಮಾಡಿ ಹತ್ಯೆ: ಪತಿ ವಿರುದ್ಧ ಪತ್ನಿ ದೂರು

Sampriya
ಶುಕ್ರವಾರ, 8 ನವೆಂಬರ್ 2024 (15:43 IST)
ಚಿತ್ರದುರ್ಗ: ಪತ್ನಿ ಜತೆ ಜಗಳವಾಡುತ್ತಿದ್ದ ವೇಳೆ ಮಗು ಊಟ ಬೇಕೆಂದು ಹಠ ಮಾಡಿ ಅಳುತ್ತಿದ್ದಕ್ಕೆ ಕೋಪಗೊಂಡ ತಂದೆ ಮಗನ ಮೇಲೆ ಗಂಭೀರ ಹಲ್ಲೆ ಮಾಡಿದ್ದರಿಂದ ಮಗು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಹಳೇ ರಂಗಾಪುರ ಗ್ರಾಮದಲ್ಲಿ ನಡೆದಿದೆ.

ಇದೀಗ ಪತಿಯ ವಿರುದ್ಧ ಪತ್ನಿಯೇ ಠಾಣೆ ಮೆಟ್ಟಿಲೇರಿ ದೂರು ನೀಡಿದ್ದಾಳೆ. ಮೃತ ಮಗುವನ್ನು ಮಂಜುನಾಥ (06) ಎಂದು ಗುರುತಿಸಲಾಗಿದೆ.

ಘಟನೆ ಹಿನ್ನೆಲೆ: ಮಂಜುನಾಥ ಊಟ ಬೇಕೆಂದು ಅಳುತ್ತಿದ್ದ. ಅದಕ್ಕಾಗಿ ತಾಯಿ ಪಕ್ಕದ ಮನೆಗೆ ಹೋಗಿ ಊಟ ತರಲೆಂದು ಹೋಗಿದ್ದಾಳೆ. ಪತ್ನಿ ಜತೆ ಜಗಳವಾಡುತ್ತಿದ್ದ ವೇಳೆ ಮಗು ಅತ್ತಿರುವುದಕ್ಕೆ ಕೋ‍ಪಗೊಂಡ ತಿಪ್ಪೇಶ್ ಮಗನ ಮೇಲೆ ಹಲ್ಲೆ ನಡೆಸಿದ್ದಾನೆ. ಬೆನ್ನು, ಪಕ್ಕೆಗೆ ಹೊಡೆದಿದ್ದು, ಮಗ ಮೂರ್ಛೆ ಹೋಗಿದ್ದಾನೆ. ತಾಯಿ ತಕ್ಷಣ ಮಗನನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ಕರೆತಂದರು. ಅಷ್ಟರಲ್ಲಿ ಬಾಲಕ ಸಾವನ್ನಪ್ಪಿದ್ದಾನೆ.

ತಿಪ್ಪೇಶ್ ವಿರುದ್ಧ ಪತ್ನಿ ಗೌರಮ್ಮ ಭರಮಸಾಗರ ಠಾಣೆಯಲ್ಲಿ ದುರುದ್ದೇಶದಿಂದ ಮಗನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ದೂರು ನೀಡಿದ್ದಾರೆ. ತಿಪ್ಪೇಶ್ ಹಾಗೂ ಗೌರಮ್ಮ ಕೆಲ ವರ್ಷದ ಹಿಂದೆ ಪ್ರೀತಿಸಿ ಮದುವೆ ಆಗಿದ್ದರು. ತಿಪ್ಪೇಶ್ ತನ್ನ ತಾಯಿ ಶೆಟ್ಟಮ್ಮ ಮಾತು ಕೇಳಿ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಗುರುವಾರ ಸಂಜೆ ಈ ವೇಳೆ ದಾರುಣ ಘಟನೆ ನಡೆದಿದ್ದು, ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಹೈಕಮಾಂಡ್ ಮೀಟಿಂಗ್ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕರ್ನಾಟಕ ಕುರ್ಚಿ ಕದನ ಕ್ಲೈಮ್ಯಾಕ್ಸ್ ಹಂತದಲ್ಲಿರುವಾಗಲೇ ತಮ್ಮ ನಿರ್ಧಾರ ಪ್ರಕಟಿಸಿದ ಡಿಕೆ ಶಿವಕುಮಾರ್

ಉಡುಪಿ ಕೃಷ್ಣನ ಊರಿನಲ್ಲಿ ಪ್ರಧಾನಿ ಮೋದಿ ಇಂದು ಏನೇನು ಮಾಡಲಿದ್ದಾರೆ

ಮುಂದಿನ ಸುದ್ದಿ
Show comments