ಮಗನಿಂದ ಡೆತ್ ನೋಟ್ ಬರೆಯಿಸಿಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ತಾಲ್ಲೂಕಿನ ಬೆಟ್ಟಗೇರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ನೇಣಿಗೆ ಶರಣಾದ ವ್ಯಕ್ತಿಯನ್ನು ನಂದಾ (37) ಎಂದು ಗುರುತಿಸಲಾಗಿದೆ. ಪೊಲೀಸ್ ಹಾಗೂ ಗ್ರಾಮ ಪಂಚಾಯತಿಗೆ ದೂರು ನೀಡಲು ಬೇಕು ಎಂದು ಸ್ಥಳೀಯ ಪ್ರೌಢಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಮಗನಿಂದ ಡೆತ್ ನೋಟ್ ಬರೆಸಿಕೊಂಡ ಆತ ಸ್ವಲ್ಪ ಸಮಯದ ಬಳಿಕ ತಮ್ಮ ಮನೆಗೆ ಹೋಗುವ ಕಾಲುದಾರಿಗೆ ಹೊಂದಿಕೊಂಡಂತೆ ಇರುವ ಮರಕ್ಕೆ ನೇಣು ಬಿಗಿದುಕೊಂಡಿದ್ದಾನೆ.
ಡೆತ್ ನೋಟ್‌ನಲ್ಲೇನಿದೆ: ನಾವು ಓಡಾಡುವ ಕಾಲುದಾರಿಯಲ್ಲಿ ಬಾಳೆಗಿಡ ನೆಟ್ಟು ನೆರೆ ಮನೆಯವರು ಕಿರುಕುಳ ನೀಡುತ್ತಿದ್ದಾರೆ. ನನ್ನ ಸಾವಿಗೆ ಇಬ್ರಾಹಿಂ, ನಂದಕುಮಾರ್, ಅಕ್ಕಮ್ಮ, ರಾಜು ಎಂಬುವವರೇ ಕಾರಣ ಎಂದಾತ ಆರೋಪಿಸಿದ್ದಾನೆ.
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ .