Select Your Language

Notifications

webdunia
webdunia
webdunia
webdunia

ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿದ ಮಗ: ಮನನೊಂದು ದಂಪತಿ ಆತ್ಮಹತ್ಯೆ

ವೃದ್ಧಾಶ್ರಮ ಪಾಲಕರು

Sampriya

ಬೆಂಗಳೂರು , ಬುಧವಾರ, 25 ಜೂನ್ 2025 (19:17 IST)
ಬೆಂಗಳೂರು: ವೃದ್ಧಾಶ್ರಮಕ್ಕೆ ಸೇರಿದ್ದ ದಂಪತಿಯೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ.

ಈ ಘಟನೆ ನಗರದ ಎಂಟನೇ ಹಂತದ ವೃದ್ಧಾಶ್ರಮದಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ದಂಪತಿಯನ್ನು ಕೃಷ್ಣಮೂರ್ತಿ (81), ರಾಧ (74) ಎಂದು ಗುರುತಿಸಲಾಗಿದೆ. 

ಸೊಸೆ ಮಾಡಿದ ಅಡುಗೆ ವಿಚಾರವಾಗಿ ಆಗಾಗ ಗಲಾಟೆ ನಡೆಯುತ್ತಿತ್ತು. ಈ ಹಿನ್ನೆಲೆ ವಯಸ್ಸಾದ ತಂದೆ ತಾಯಿಯನ್ನು ಮಗ ಕಳೆದ ತಿಂಗಳು ವೃದ್ಧಾಶ್ರಮಕ್ಕೆ ಸೇರಿಸಿದ್ದ. ಇದರಿಂದ ನೊಂದ ವೃದ್ಧ ದಂಪತಿ ಸೋಮವಾರ ರಾತ್ರಿ ವೃದ್ಧಾಶ್ರಮದಲ್ಲಿ ನೇಣಿಗೆ ಶರಣಾಗಿದ್ದಾರೆ.

ಮಂಗಳವಾರ ಬೆಳಗಿನ ಜಾವ ದಂಪತಿ ಬಾಗಿಲು ತೆಗೆದಿರಲಿಲ್ಲ. ಅನುಮಾನಗೊಂಡ ಆಶ್ರಮದವರು ಬಾಗಿಲು ತೆಗೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಕೆಆರ್‌ಎಸ್‌ ಉದ್ಯಾನವನದಲ್ಲಿ ಕಾವೇರಿ ಆರತಿಗೆ ರಾಜ್ಯ ಸರ್ಕಾರ ಚಿಂತನೆ