Daily Horoscope

Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ಸಕ್ರಿಯ ರಾಜಕಾರಣದ ಬಗ್ಗೆ ಮಹತ್ವದ ಅಪ್‌ಡೇಟ್‌ ನೀಡಿದ ಪುತ್ರ ಯತೀಂದ್ರ

Former Chief Minister Siddaramaiah, Minister Yathindra Siddaramaiah, Congress High Command
Photo Courtesy X
ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ತಿಂಗಳ ಹಿಂದೆಯಷ್ಟೇ ನಿರ್ಗಮಿಸಿರುವ ಸಿದ್ದರಾಮಯ್ಯ ಅವರ ಸಕ್ರಿಯ ರಾಜಕಾರಣದ ಬಗ್ಗೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಅವರ ಪುತ್ರ, ಸಚಿವರೂ ಆಗಿರುವ ಯತೀಂದ್ರ ಸಿದ್ದರಾಮಯ್ಯ ಮಹತ್ವದ ಅಪ್‌ಡೇಟ್‌ ನೀಡಿದ್ದಾರೆ. 

ಸಕ್ರಿಯ ರಾಜಕಾರಣದ ಕುರಿತು ಸಿದ್ದರಾಮಯ್ಯ ಅವರ ಹೇಳಿಕೆಯೊಂದು ಭಾರೀ ಚರ್ಚೆಯಾಗುತ್ತಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಯತೀದ್ರ ಅವರು, ಸಿದ್ದರಾಮಯ್ಯ ಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆಯೇ ಹೊರತು, ಸಕ್ರಿಯ ರಾಜಕಾರಣದಿಂದ ದೂರು ಸರಿಯುವುದಾಗಿ ಹೇಳಿಲ್ಲ ಎಂದು ಬೆಳಗಾವಿಯಲ್ಲಿ ಅವರು ಹೇಳಿದ್ದಾರೆ.

2028ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಾರೆ ಎಂದು ಈ ಹಿಂದೆಯೂ ಹಲವು ಸಲ ಹೇಳಿದ್ದಾರೆ. ಈಗ ನೀಡಿದ ಹೇಳಿಕೆಯಲ್ಲಿ ಹೊಸತೇನೂ ಇಲ್ಲ. ಸಮಾಜದಲ್ಲಿ ಇರುವ ದುರ್ಬಲರು ಮತ್ತು ಶೋಷಿತರ ಪರವಾಗಿ ಧ್ವನಿ ಎತ್ತುವ ಕೆಲಸ ಮುಂದುವರಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ತಂದೆಯ ಪರ ಬ್ಯಾಟಿಂಗ್‌ ಮಾಡಿದ್ದಾರೆ. 

ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೆ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದರ್ಥವಲ್ಲ. ಮುಂದಿನ ವಿಧಾನಸಭೆ ಚುನಾವಣೆಯಲ್ಲೂ ಅವರು ಕಾಂಗ್ರೆಸ್‌ ಪರ ರಾಜ್ಯದಾದ್ಯಂತ ಪ್ರಚಾರ ಮಾಡುತ್ತಾರೆ ಎಂದೂ ಹೇಳಿದರು.

ಕಾಂಗ್ರೆಸ್‌ ಹೈಕಮಾಂಡ್‌ನವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆದಿದ್ದಾರೆ. ಅಲ್ಲಿ ವರಿಷ್ಠರೆಲ್ಲ ಚರ್ಚಿಸಿ, ಸಂಪುಟ ವಿಸ್ತರಣೆ ಸಂಬಂಧ ಚರ್ಚೆ ನಡೆಸುವರು ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಸಾವಿರ ರೂ ಕೊಡ್ತೀನಿ, ಬರ್ತೀಯಾ ಎಂದು ಮಧ್ಯರಾತ್ರಿ ಮಂಚಕ್ಕೆ ಕರೆದ ಭೂಪ: ಮಹಿಳೆಯ ರಿಯಾಕ್ಷನ್ ಏನಿತ್ತು ಗೊತ್ತಾ Video