Publish Date: Wed, 17 Dec 2025 (20:03 IST)
Updated Date: Wed, 17 Dec 2025 (20:06 IST)
ಬೆಳಗಾವಿ: ಆರೋಗ್ಯದಲ್ಲಿ ಏರುಪೇರಾದ ಕಾರಣ ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಅವರು ಸದನ ಕಲಾಪಗಳಿಂದ ದೂರ ಉಳಿದರು. ನಗರದ ಪ್ರವಾಸಿ ಮಂದಿರದಲ್ಲೇ ಇಡೀ ದಿನ ವಿಶ್ರಾಂತಿ ಪಡೆದರು.
ಇನ್ನೂ ಸಿದ್ದರಾಮಯ್ಯ ಅವರುನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನ್ಯಾಯಾಲಯ ನೀಡಿದ ತೀರ್ಪನ್ನು ಬೆಂಬಲಿಸಿ, ಕೇಂದ್ರ ಸರ್ಕಾರ ಸುಳ್ಳು ಪ್ರಕರಣ ದಾಖಲಿಸಿದ್ದನ್ನು ಖಂಡಿಸಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಕೈಗೊಂಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಒಂದು ತಾಸು ಧರಣಿ ಕುಳಿತರು. ಸದನದೊಳಗೆ ಹೋದ ಅವರು, ಕೆಲ ಸಮಯದ ನಂತರ ಪ್ರವಾಸಿ ಮಂದಿರಕ್ಕೆ ಮರಳಿದರು.
ಆರೋಗ್ಯ ವಿಚಾರಿಸಿದ ರಮೇಶ ಜಾರಕಿಹೊಳಿ ಅವರು ನಾನು ಪ್ರವಾಸಿ ಮಂದಿರಕ್ಕೆ ಬಂದಿರುವುದು ಸಿಎಂ ಆರೋಗ್ಯ ವಿಚಾರಿಸುವ ಸಲುವಾಗಿ ಅಷ್ಟೇ ಎಂದಿದ್ದಾರೆ.
ಇನ್ನೂ ತಂದೆಗೆ ಹುಷಾರಿಲ್ಲ ಎಂಬ ವಿಷಯ ತಿಳಿಯುತ್ತಿದ್ದ ಹಾಗೇ ಪುತ್ರ ಯತೀಂದ್ರ ಅವರು, ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ, ಆರೋಗ್ಯ ವಿಚಾರಿಸಿದ್ದಾರೆ.