Select Your Language

Notifications

webdunia
webdunia
webdunia
webdunia

ಗೃಹಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ: ಪರಮೇಶ್ವರ್‌ಗೆ ಸೋನಿಯಾ ಆದೇಶ

ಗೃಹಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ: ಪರಮೇಶ್ವರ್‌ಗೆ ಸೋನಿಯಾ ಆದೇಶ
ಬೆಂಗಳೂರು , ಬುಧವಾರ, 31 ಮೇ 2017 (17:31 IST)
ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸುತ್ತಿರುವುದರಿಂದ ತಕ್ಷಣದಿಂದಲೇ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಸೂಚನೆ ನೀಡಿದ್ದಾರೆ.
 
ಕೆಪಿಸಿಸಿ ಅಧ್ಯಕ್ಷರಾಗಿ ಜಿ.ಪರಮೇಶ್ವರ್ ಮುಂದುವರಿಯಲಿದ್ದಾರೆ ಯಾವುದೇ ಬದಲಾವಣೆಯಿಲ್ಲ. ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ತಿಳಿಸಲಾಗಿದೆ ಎಂದು ಎಐಸಿಸಿ ಮೂಲಗಳು ತಿಳಿಸಿವೆ.
 
ಕೆಪಿಸಿಸಿ ಅಧ್ಯಕ್ಷ ಸ್ಥಾನದೊಂದಿಗೆ ಗೃಹ ಸಚಿವ ಖಾತೆಯತ್ತ ಕೂಡಾ ಒಲವು ಇದೆ ಎಂದು ಜಿ.ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷ ಸ್ಥಾನದೊಂದಿಗೆ ಗೃಹ ಸಚಿವರಾಗಿಯೂ ಮುಂದುವರಿಯಬೇಕು ಎನ್ನುವ ಬಯಕೆ ಹೊಂದಿದ್ದರು. ಇದೀಗ ಅವರ ಬಯಕೆಗೆ ಹೈಕಮಾಂಡ್ ತಣ್ಣೀರು ಎರಚಿದೆ.

ಗೃಹ ಸಚಿವ ಪರಮೇಶ್ವರ್ ನಾಳೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಕೆಪಿಸಿಸಿಯಲ್ಲಿ ಕೆಲ ಬದಲಾವಣೆ ಮಾಡಲಾಗಿದ್ದು, ಸಿಎಂ ಸಿದ್ದರಾಮಯ್ಯ ನಾಯಕತ್ವದಲ್ಲಿಯೇ ಚುನಾವಣೆ ನಡೆಯಲಿದೆ ಎನ್ನುವುದನ್ನು ಸ್ಪಷ್ಟಪಡಿಸಿದ ಎಐಸಿಸಿ, ಎಲ್ಲ ನಾಯಕರು ಒಗ್ಗಟ್ಟಿನಿಂದ ಪಕ್ಷವನ್ನು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಯತ್ನಿಸಿ ಎಂದು ಸಲಹೆ ನೀಡಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಸಿದ್ದರಾಮಯ್ಯ ನಾಯಕತ್ವದಲ್ಲಿಯೇ ಚುನಾವಣೆ: ಎಐಸಿಸಿ ಘೋಷಣೆ